54 ವರ್ಷಗಳಿಂದ ಗಮನಾರ್ಹ ಸಾಧನೆಗೈದ ಬಸ್ರೂರು ಶ್ರೀ ಶಾರದಾ ಕಾಲೇಜು—2026-27ನೇ ಸಾಲಿನ ನೂತನ ಕೋರ್ಸುಗಳೊಂದಿಗೆ ಪ್ರವೇಶ ಪ್ರಕ್ರಿಯೆ ಆರಂಭ
2026-27ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಬಿ.ಕಾಂ, ಬಿಬಿಎ, ಬಿಸಿಎ ಮತ್ತು ಬಿ.ಎ ಪದವಿ ಕೋರ್ಸುಗಳಿಗೆ ಅವಕಾಶವಿದೆ. ಜೊತೆಗೆ ಸಿಎ ಮತ್ತು ಸಿಎಸ್ ಅಧ್ಯಯನಕ್ಕೂ ಅವಕಾಶ ಕಲ್ಪಿಸಲಾಗಿದೆ. ಈ ವರ್ಷದಿಂದ ತಾಂತ್ರಿಕ ಹಾಗೂ ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ಕೋರ್ಸುಗಳಾದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಸೈಬರ್ ಸೆಕ್ಯೂರಿಟಿ, ಡಾಟಾ ಅನಾಲಿಸಿಸ್, ಕ್ಲೌಡ್ ಕಂಪ್ಯೂಟಿಂಗ್, ಎವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್, ರಿಟೇಲ್ ಮ್ಯಾನೇಜ್ಮೆಂಟ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಕೋರ್ಸುಗಳನ್ನು ಪರಿಚಯಿಸಲಾಗಿದೆ.
Views: 26
ಕನ್ನಡ ಕರಾವಳಿ ಸುದ್ದಿ: ಕುಂದಾಪುರ ತಾಲ್ಲೂಕಿನ ಬಸ್ರೂರು ಹಾಗೂ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಸ್ಥಳೀಯ ಮಟ್ಟದಲ್ಲೇ ಗುಣಮಟ್ಟದ ಉನ್ನತ ಶಿಕ್ಷಣ ಒದಗಿಸುವ ಉದ್ದೇಶದಿಂದ 1972ರಲ್ಲಿ ಶ್ರೀ ಶಾರದಾ ಕಾಲೇಜು ಟ್ರಸ್ಟ್ ವತಿಯಿಂದ ಸ್ಥಾಪಿತವಾದ ಬಸ್ರೂರು ಶ್ರೀ ಶಾರದಾ ಕಾಲೇಜು, ಕಳೆದ 54 ವರ್ಷಗಳಿಂದ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ.

ಐದು ದಶಕಗಳ ಇತಿಹಾಸದಲ್ಲಿ ಕಾಲೇಜು ಶೈಕ್ಷಣಿಕ, ಸಾಹಿತ್ಯಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ವಿದ್ಯಾರ್ಥಿಗಳ ಸಮಗ್ರ ವ್ಯಕ್ತಿತ್ವ ವಿಕಾಸಕ್ಕಾಗಿ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ.
ಇತ್ತೀಚೆಗೆ ನಿಧನರಾದ ದಿ. ಬಸ್ರೂರು ಅಪ್ಪಣ್ಣ ಹೆಗ್ಡೆ ಅವರ ನಂತರ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾಗಿ ಶ್ರೀಮತಿ ಅನುಪಮಾ ಎಸ್. ಶೆಟ್ಟಿ ಆಯ್ಕೆಯಾಗಿದ್ದಾರೆ. ಆಡಳಿತ ಮಂಡಳಿ ಮತ್ತು ವಿಶ್ವಸ್ಥ ಮಂಡಳಿಯ ಮಾರ್ಗದರ್ಶನದಲ್ಲಿ ನೂತನ ಪ್ರಾಂಶುಪಾಲರಾದ ಡಾ. ದಯಾನಂದ ಎನ್. ಬಾಯರ್ ನೇತೃತ್ವದಲ್ಲಿ ಕಾಲೇಜನ್ನು ಮತ್ತಷ್ಟು ಅಗ್ರಸ್ಥಾನಕ್ಕೆ ಏರಿಸುವ ಕಾರ್ಯಯೋಜನೆ ರೂಪಿಸಲಾಗಿದೆ.
2026-27ನೇ ಶೈಕ್ಷಣಿಕ ಸಾಲಿಗೆ ನೂತನ ಕೋರ್ಸುಗಳೊಂದಿಗೆ ಪ್ರವೇಶ ಪ್ರಕ್ರಿಯೆ
2026-27ನೇ ಶೈಕ್ಷಣಿಕ ಸಾಲಿಗೆ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದ್ದು, ಬಿ.ಕಾಂ, ಬಿಬಿಎ, ಬಿಸಿಎ ಮತ್ತು ಬಿ.ಎ ಪದವಿ ಕೋರ್ಸುಗಳಿಗೆ ಅವಕಾಶವಿದೆ. ಜೊತೆಗೆ ಸಿಎ ಮತ್ತು ಸಿಎಸ್ ಅಧ್ಯಯನಕ್ಕೂ ಅವಕಾಶ ಕಲ್ಪಿಸಲಾಗಿದೆ. ಈ ವರ್ಷದಿಂದ ತಾಂತ್ರಿಕ ಹಾಗೂ ಉದ್ಯೋಗಾಧಾರಿತ ಕೌಶಲ್ಯಾಭಿವೃದ್ಧಿ ಕೋರ್ಸುಗಳಾದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್, ಸೈಬರ್ ಸೆಕ್ಯೂರಿಟಿ, ಡಾಟಾ ಅನಾಲಿಸಿಸ್, ಕ್ಲೌಡ್ ಕಂಪ್ಯೂಟಿಂಗ್, ಎವಿಯೇಷನ್ ಮತ್ತು ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್, ರಿಟೇಲ್ ಮ್ಯಾನೇಜ್ಮೆಂಟ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಕೋರ್ಸುಗಳನ್ನು ಪರಿಚಯಿಸಲಾಗಿದೆ.
ವಿದ್ಯಾರ್ಥಿಗಳು ಶೈಕ್ಷಣಿಕ ಉತ್ತಮ ಸಾಧನೆಗೆ–ಅನುಭವಿ ಬೋಧಕ ಸಿಬ್ಬಂಧಿ
ರಾಷ್ಟ್ರೀಯ ಮಾನ್ಯತಾ ಮಂಡಳಿ (ನ್ಯಾಕ್) ಯಿಂದ ‘ಬಿ++’ ಮಾನ್ಯತೆ ಪಡೆದಿರುವ ಕಾಲೇಜಿನಲ್ಲಿ ಅನುಭವಿ ಬೋಧಕ ಹಾಗೂ ಬೋಧಕೇತರ ಸಿಬ್ಬಂಧಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿ ವಿವಿಧ ರ‍್ಯಾಂಕ್‌ಗಳನ್ನು ಪಡೆದುಕೊಂಡಿದ್ದಾರೆ. ಇಂಗ್ಲೀಷ್ ಭಾಷಾ ತರಬೇತಿ ಹಾಗೂ ಮಧ್ಯಾಹ್ನ ಉಚಿತ ಊಟದ ವ್ಯವಸ್ಥೆ ಕೂಡ ಕಲ್ಪಿಸಲಾಗಿದೆ.
ಶಿಕ್ಷಣದ ಜೊತೆಗೆ ಶಿಕ್ಷಣೇತರ ಚಟುವಟಿಕೆಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಸಾಹಿತ್ಯ, ಕ್ರೀಡೆ, ವಿಜ್ಞಾನ ಹಾಗೂ ಸಾಮಾಜಿಕ ವಿಷಯಗಳಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿವೇತನದ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲಾಗುತ್ತಿದೆ.
‘ಬಸ್ರೂರು ಅಪ್ಪಣ್ಣ ಹೆಗ್ಡೆ ಡಿಜಿಟಲ್ ಲರ್ನಿಂಗ್ ಸೆಂಟರ್‘
ಡಿಜಿಟಲ್ ಸೌಲಭ್ಯಗಳನ್ನು ವಿಸ್ತರಿಸುವ ಉದ್ದೇಶದಿಂದ ಶ್ರೀಮತಿ ಅನುಪಮಾ ಎಸ್. ಶೆಟ್ಟಿ ಮತ್ತು ಶ್ರೀ ಸುಭಾಶ್ಚಂದ್ರ ಶೆಟ್ಟಿ ಬಾಂಡ್ಯ ಅವರ ಸಹಕಾರದಿಂದ ‘ಬಸ್ರೂರು ಅಪ್ಪಣ್ಣ ಹೆಗ್ಡೆ ಡಿಜಿಟಲ್ ಲರ್ನಿಂಗ್ ಸೆಂಟರ್’ ಸ್ಥಾಪಿಸಲಾಗಿದೆ. ವಿಶಾಲ ಗ್ರಂಥಾಲಯದಲ್ಲಿ 31,972ಕ್ಕೂ ಅಧಿಕ ಪುಸ್ತಕಗಳು, 25 ನಿಯತಕಾಲಿಕೆಗಳು, 10 ದಿನಪತ್ರಿಕೆಗಳು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾದ ಸಂಪನ್ಮೂಲಗಳು ಲಭ್ಯವಿದ್ದು, ಇ-ಲ್ಯಾಬ್ ತಂತ್ರಾಂಶ ಮತ್ತು ಬಾರ್‌ಕೋಡ್ ವ್ಯವಸ್ಥೆ ಜಾರಿಯಲ್ಲಿದೆ. ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಹಾಗೂ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸಲಾಗುತ್ತಿದೆ.
ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣಗಳೊಂದಿಗೆ ವೃತ್ತಿಪರ ತರಬೇತಿ ಸೌಲಭ್ಯಗಳಿದ್ದು, ವಿದ್ಯಾರ್ಥಿಗಳು ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡುತ್ತಿದ್ದಾರೆ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿ ಸರ್ಕಾರಿ ಉದ್ಯೋಗ ಪಡೆದಿರುವ ಚಂದನ್, ಚೇತನ್, ನವೀನ್ ಕಾಂಚನ್, ಪ್ರೀತಿ ಹಾಗೂ ಸನ್ನಿಧಿ ಕಾಲೇಜಿನ ಹೆಮ್ಮೆಯ ಸಾಧಕರು.
ದೂರದ ವಿದ್ಯಾರ್ಥಿನಿಯರಿಗಾಗಿ ಹಾಸ್ಟೆಲ್ ಸೌಲಭ್ಯ
ಸುಸಜ್ಜಿತ ಕಟ್ಟಡ, ಆಧುನಿಕ ಕಂಪ್ಯೂಟರ್ ಲ್ಯಾಬ್, ವಿಶಾಲ ಕ್ರೀಡಾಂಗಣ ಮತ್ತು ಮಾಲಿನ್ಯರಹಿತ ಪರಿಸರ ಹೊಂದಿರುವ ಈ ಕಾಲೇಜನ್ನು ಜಿಲ್ಲೆಯ ಮಾದರಿ ಶಿಕ್ಷಣ ಸಂಸ್ಥೆಯನ್ನಾಗಿಸುವ ದಿಶೆಯಲ್ಲಿ ಶಿಕ್ಷಣ ಹಾಗೂ ಇತರ ಕ್ಷೇತ್ರಗಳಲ್ಲಿನ ತಜ್ಞರು ಹಾಗೂ ಅನುಭವಿಗಳ ಮಾರ್ಗದರ್ಶನ ಪಡೆದುಕೊಂಡು, ಅನೇಕ ಉನ್ನತೀಕರಣದ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕಾಲೇಜು ಆಡಳಿತ ಮಂಡಳಿಯ ಸಂಚಾಲಕರು ಅನುಪಮಾ ಎಸ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದೆ.






