ದಕ್ಷಿಣ ಕನ್ನಡ: ಖೋಟಾ ನೋಟು ಮುದ್ರಣ ಜಾಲ ಪತ್ತೆ,7 ಆರೋಪಿಗಳು ಪೊಲೀಸರ ವಶಕ್ಕೆ
Views: 60
ಕನ್ನಡ ಕರಾವಳಿ ಸುದ್ದಿ :ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಖೋಟಾ ನೋಟು ಮುದ್ರಣ ಜಾಲ ಪತ್ತೆಯಾಗಿದೆ. ದಾಳಿ ನಡೆಸಿದ ಉಪ್ಪಿನಂಗಡಿ ಠಾಣಾ ಪೊಲೀಸರು 7 ಆರೋಪಿಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಉಪಕರಣಗಳನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕು ಕಣಿಯೂರು ಗ್ರಾಮದ ಅಡೆಂಜ ಎಂಬಲ್ಲಿರುವ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿಕೊಂಡು ಭಾರತೀಯ ನಕಲಿ ಕರೆನ್ಸಿ ನೋಟುಗಳನ್ನು ಅಂದ್ರೆ ಖೋಟಾ ನೋಟುಗಳನ್ನು ಮುದ್ರಿಸುತ್ತಿರುವ ಬಗ್ಗೆ, ಉಪ್ಪಿನಂಗಡಿ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಸುತೇಶ್ ಕೆ ಪಿ, ರವರಿಗೆ ಮಾಹಿತಿ ಬಂದ ಮೇರೆಗೆ ಸದ್ರಿಯವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ದಾಳಿ ನಡೆಸಿ ಆರೋಪಿತಗಳಾದ ಇಬ್ರಾಹಿಂ, ಶರೀಫ್, ಸಂದೀಪ ಪುಂಡಲಿಕ ಶೋಳಂಬಿ, ಮಹಮ್ಮದ್ ನಬಾಸ್, ಸಲ್ಮಾನ್ ಫಾರೀಸ್, ಸಿರಾಜುದ್ದೀನ್, ಇರ್ಷಾದ್ ಎಂಬವರುಗಳನ್ನು ವಶಕ್ಕೆ ಪಡೆದಿದ್ದಾರೆ.
ಸ್ಥಳದಲ್ಲಿ 500 ಮುಖಬೆಲೆಯ ನೋಟು ನೋಟುಗಳಂತೆ ಕಾಣುವ A-4 ಸೈಜ್ ಹಾಳೆಗಳು-21 ಹಾಗೂ ಗಣಕಯಂತ್ರ, ಝರಾಕ್ಸ್ ಮೆಷಿನ್, ಸೀಲ್ ಗಳು ಸೇರಿದಂತೆ ಇತರೆ ಸೊತ್ತುಗಳು ಪತ್ತೆಯಾಗಿದ್ದು, ಅವುಗಳನ್ನು ಸ್ವಾಧೀನಪಡಿಸಿಕೊಂಡು ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ: 103/2026 ಕಲಂ: 178 BNS-2023 ರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿಂದು ಮಣಿ ಆರ್ ಎನ್, ಐ.ಪಿ.ಎಸ್ ರವರು ಹಾಗೂ ಕೊಡಗು ಜಿಲ್ಲಾ ಸಿಬ್ಬಂದಿಗಳಾದ ಯೊಗೀಶ್ ಬಿ, HC 193 ಮತ್ತು ನಿರಂಜನ್ ಎಂ ಎನ್, HC 190 ರವರುಗಳು, ದ.ಕ ಜಿಲ್ಲಾ ವಿಶೇ಼ಷ ಘಟಕದ ಪೊಲೀಸ್ ನಿರೀಕ್ಷಕರಾದ ನಂದಕುಮಾರ್ ರವರು ಹಾಗೂ ಸಿಬ್ಬಂದಿಗಳಾದ ಎ.ಎಸ್.ಐ ದೀಪಕ್, ಹೆಚ್.ಸಿ ಸತೀಶ್ ಹಾಗೂ ಹೆಚ್.ಸಿ ರೌಫ್ ರವರುಗಳು ಸದ್ರಿ ಜಾಲವನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸುವಲ್ಲಿ ಉಪ್ಪಿನಂಗಡಿ ಪಿ.ಎಸ್.ಐ ರವರೊಂದಿಗೆ ಸಹಕರಿಸಿರುತ್ತಾರೆ.






