ಯುವಜನ

ಉಡುಪಿ: ದೇವಸ್ಥಾನದ ಕೆರೆಯಲ್ಲಿ ಈಜುತ್ತಿದ್ದ ವೇಳೆ ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು 

Views: 134

ಕನ್ನಡ ಕರಾವಳಿ ಸುದ್ದಿ: ನಗರದ ತೆಂಕಪೇಟೆಯ ಶ್ರೀಲಕ್ಷ್ಮೀ ವೆಂಕಟರಮಣ ದೇವಸ್ಥಾನದ ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ.

ಬೆಳ್ಳಂಪಳ್ಳಿ ಕುಕ್ಕಿಕಟ್ಟೆಯ ಕೃಷ್ಣ ನಾಯಕ್ ಎಂಬುವವರ ಮಗ ಆದಿತ್ಯ ನಾಯಕ್ (15) ಮೃತಪಟ್ಟ ವಿದ್ಯಾರ್ಥಿ

ಕುಕ್ಕಿಕಟ್ಟೆಯ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ಆದಿತ್ಯ ನಾಯಕ್ ದೇಗುಲದಲ್ಲಿ ನಡೆಯುತ್ತಿರುವ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಪೋಷಕರ ಜೊತೆ ಆಗಮಿಸಿದ್ದ

ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮ ನಡೆಯುತ್ತಿರುವುದರಿಂದ ಅಲ್ಲಿಗೆ ಸಂಬಂಧಿಯೊಂದಿಗೆ ಬಂದಿದ್ದ ಆದಿತ್ಯ, ಕೆರೆಗಿಳಿದು ಈಜುತ್ತಿದ್ದ ವೇಳೆ ಅಕಸ್ಮಿಕವಾಗಿ ನೀರಿನಲ್ಲಿ ಮುಳುಗಿ ನಾಪತ್ತೆಯಾದನು.ಅನಂತರ ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಕೆರೆಗೆ ಇಳಿದು ಸುಮಾರು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದ್ದಾರೆ.

ಉಡುಪಿ ನಗರ ಠಾಣೆಯ ಪೊಲೀಸರು ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!