ಇತರೆ

ಮೀನುಗಾರ ಮಹಿಳೆಯರ ಮೇಲೆ ಹಲ್ಲೆಗೈದ ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಸ್ಥಳೀಯರಿಂದ ಧರ್ಮದೇಟು

Views: 81

ಕನ್ನಡ ಕರಾವಳಿ ಸುದ್ದಿ: ದೇವಸ್ಥಾನದ ಮುಖಮಂಟಪದ ಸಮೀಪ ಮಹಿಳೆಯರು ಮೀನು ಮಾರುತ್ತಿದ್ದಾರೆ ಎಂದು ವಿರೋಧಿಸಿ ಬುಟ್ಟಿಯಲ್ಲಿ ಇಟ್ಟಿದ್ದ ಮೀನುಗಳನ್ನು ಚೆಲ್ಲಿ, ಮಹಿಳೆಯರಿಗೆ ಹಲ್ಲೆ ಮಾಡಿದ ಘಟನೆ ಯಲ್ಲಾಪುರದ ಮಂಚಿಕೇರಿಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅಜಯ್ ಭಂಡಾರ್ಕರ್ ಅತಿರೇಕದ ಗೂಂಡಾವರ್ತನೆಗೆ ಸ್ಥಳೀಯರು ಧರ್ಮದೇಟು ನೀಡಿದ್ದಾರೆ.

ಅಜತ್ ಭಂಡಾರ್ಕರ್ ಬೈದೂರಿನಲ್ಲಿ ಅಧಿಕಾರಿಯಾಗಿದ್ದರೂ ಅವರ ಮನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿಯಲ್ಲಿ. ತನ್ನ ಮನೆಗೆ ಹೋಗುವ ದಾರಿಯಲ್ಲಿ ಮೀನು ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಆದರೆ ಮೀನು ಮಾರಾಟ ಮಹಿಳೆಯರು ಹೊಟ್ಟೆಪಾಡಿಗಾಗಿ ಹಲವು ವರ್ಷಗಳಿಂದ ಇದೇ ಸ್ಥಳದಲ್ಲಿ ವ್ಯಾಪಾರ ಮಾಡಿಕೊಂಡಿದ್ದು ಅಜಯ್ ಮಾತು ಕೇಳದ ಹಿನ್ನಲೆಯಲ್ಲಿ ಮೀನು ಮಾರಾಟ ಮಹಿಳೆಯರ ಬಳಿ ತೆರಳಿ ಒತ್ತಾಯಪೂರ್ವಕವಾಗಿ ತೆರವು ಮಾಡಲು ಮುಂದಾಗಿದ್ದಾರೆ. ಬುಟ್ಟಿಯಲ್ಲಿದ್ದ ಮೀನುಗಳನ್ನೆಲ್ಲ ಚೆಲ್ಲಿ ಮಹಿಳೆಯರ ಮೇಲೆ ಹಲ್ಲೆ ನಡೆಸಿದ್ದಾರೆ. ಇದನ್ನು ಪ್ರಶ್ನಿಸಿದ ಸ್ಥಳೀಯರ ಮೇಲೂ ಹಲ್ಲೆಗೆ ಮುಂದಾದ ಅಜಯ್ ಭಂಡಾರ್ಕರ್ ಹಾಗೂ ಆತನ ಸ್ನೇಹಿತನ ಮೇಲೆ ಸ್ಥಳೀಯರು ಧರ್ಮದೇಟು ನೀಡಿ ಯಲ್ಲಾಪುರ ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳೀಯರು ಅಜಯ್ ಭಂಡಾರ್ಕರ್ ಹಾಗೂ ಸ್ನೇಹಿತ ಕುಡಿದ ಮತ್ತಿನಲ್ಲಿ ಹಲ್ಲೆ ನಡೆಸಿರುವುದಾಗಿ ಆರೋಪಿಸಿದ್ದಾರೆ. ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button
error: Content is protected !!