ರಾಜಕೀಯ

ಕಾಳಾವರ ಗ್ರಾಮ ಪಂಚಾಯತ್: ಅಧ್ಯಕ್ಷರಾಗಿ ಮಂಜುನಾಥ ಶೆಟ್ಟಿಗಾರ, ಉಪಾಧ್ಯಕ್ಷರಾಗಿ ಪಾರ್ವತಿ ಸೇರಿಗಾರ್ ಆಯ್ಕೆ

Views: 597

ಕುಂದಾಪುರ : ವಕ್ವಾಡಿ,ಕಾಳಾವರ,ಅಸೋಡು ವ್ಯಾಪ್ತಿಯ ಕಾಳಾವರ ಗ್ರಾಮ ಪಂಚಾಯತ್ ಎರಡನೆಯ ಅವಧಿಗೆ ಅಧ್ಯಕ್ಷರಾಗಿ ಸಿಪಿಎಂ ಬೆಂಬಲಿತ ಮಂಜುನಾಥ್ ಶೆಟ್ಟಿಗಾರ್, ಉಪಾಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಪಾರ್ವತಿ ಶೇರಿಗಾರ್ ಆಯ್ಕೆಯಾಗಿದ್ದಾರೆ.

ಪಂಚಾಯಿತಿಯಲ್ಲಿ ಒಟ್ಟು 17 ಜನ ಸದಸ್ಯರಿದ್ದು, ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು.

ಚುನಾವಣಾ ಅಧಿಕಾರಿಯಾಗಿ ಸಹಾಯಕ ಅಭಿಯಂತರರು ಶ್ರೀ ಶಿವಮೂರ್ತಿ ಅವರು ಚುನಾವಣಾ ಕ್ರಮಗಳನ್ನು ನಡೆಸಿಕೊಟ್ಟರು. ನಿಕಟಪೂರ್ವ ಅಧ್ಯಕ್ಷರಾದ ಆಶಾಲತಾ ಶೆಟ್ಟಿ, ಉಪಾಧ್ಯಕ್ಷರಾದ ರಾಮಚಂದ್ರ ನಾವಡ ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

Related Articles

Back to top button
error: Content is protected !!