ಯುವಜನ

ಕುಂದಾಪುರ: ಕೋಟೇಶ್ವರದ ಕೋಟಿ ತೀರ್ಥ ಪುಷ್ಕರಣಿಗೆ ಹಾರಿ ಯುವಕ ಆತ್ಮಹತ್ಯೆ

Views: 0

ಕನ್ನಡ ಕರಾವಳಿ ಸುದ್ದಿ: ಕೋಟೇಶ್ವರದ ಹೊದ್ರಾಳಿ ಯುವಕ ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದ ಕೋಟಿ ತೀರ್ಥ ಪುಷ್ಕರಣಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ.

ಮೃತಪಟ್ಟ ಯುವಕ ಕೋಟೇಶ್ವರ ಸಮೀಪದ ಹೊದ್ರಾಳಿ ಕೊಳನಕಟ್ಟೆ ನಿವಾಸಿ ಮಹಾಬಲ ಆಚಾರ್ಯ ಅವರ ಪುತ್ರ ಪದ್ಮನಾಭ ಆಚಾರ್ಯ (37) ಎಂದು ಗುರುತಿಸಲಾಗಿದೆ.

ಕುಂದಾಪುರದ ಹೆಂಚಿನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಪದ್ಮನಾಭ ಕಳೆದ ನಾಲ್ಕು ತಿಂಗಳಿನಿಂದ ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ ಎನ್ನಲಾಗಿದೆ. ಮಂಗಳವಾರ ಬೆಳಿಗ್ಗೆ ಮನೆಯಿಂದ ಅವರು ತೆರಳಿದ್ದು ರಾತ್ರಿಯಾದರೂ ಮನೆಗೆ ಹಿಂದಿರುಗಿ ಬಂದಿರಲಿಲ್ಲ. ರಾತ್ರಿ ವೇಳೆ ಇವರ ದ್ವಿಚಕ್ರ ವಾಹನ ದೇವಸ್ಥಾನದ ಸಮೀಪ ಪತ್ತೆಯಾಗಿತ್ತು. ಮನೆಯವರು ಹುಡುಕಾಟ ಮಾಡಿದ್ದರೂ ಸುಳಿವು ದೊರೆತಿರಲಿಲ್ಲ. ಕೋಟಿ ತೀರ್ಥ ಪುಷ್ಕರಣಿಯ ಪೂರ್ವ ಭಾಗದ ಮೆಟ್ಟಿಲಿನ ಮೇಲೆ ಚಪ್ಪಲಿ ಹಾಗೂ ಟೋಪಿ ಸಿಕ್ಕಿದ ಕಾರಣ ಕೆರೆಗೆ ಹಾರಿರುವ ಶಂಕೆ ವ್ಯಕ್ತವಾಗಿದ್ದು, ಬುಧವಾರ ಬೆಳಿಗ್ಗೆ ಮುಳುಗು ತಜ್ಞ ಈಶ್ವರ ಮಲ್ಪೆ ಮತ್ತು ಸ್ಥಳೀಯ ತಂಡದವರ ನೆರವಿನೊಂದಿಗೆ ಮೃತದೇಹವನ್ನು ಬೆಳಿಗ್ಗೆ 9ಗಂಟೆ ಹೊತ್ತಿಗೆ ಮೇಲಕ್ಕೆ ಎತ್ತಲಾಯಿತು.ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೆ ತಿಳಿದು ಬರಬೇಕಾಗಿದೆ.

ಕುಂದಾಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

Back to top button
error: Content is protected !!