ಕರಾವಳಿ

ಮೀನುಗಾರ ಮಹಿಳೆ ಮೇಲೆ ಹಲ್ಲೆ: ವ್ಯಾಪಕ ಆಕ್ರೋಶ, ಪ್ರತಿಭಟನೆ ಬೆನ್ನಲ್ಲೇ ಬೈಂದೂರು ಪ.ಪಂ ಅಧಿಕಾರಿ ಹುದ್ದೆಯಿಂದ ಬಿಡುಗಡೆ ಆದೇಶ

Views: 41

ಕನ್ನಡ ಕರಾವಳಿ ಸುದ್ದಿ: ಬಡ ಮೀನುಗಾರ ಮಹಿಳೆಯ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ಹಾಗೂ ಪ್ರತಿಭಟನೆಗಳು ವ್ಯಕ್ತವಾದವು. ಇದರ ಬೆನ್ನಲ್ಲೇ, ಸರ್ಕಾರವು ತಕ್ಷಣದ ಕ್ರಮ ಕೈಗೊಂಡು ಅಜಯ್ ಭಂಡಾರ್ಕರ್ ಅವರನ್ನು ಬೈಂದೂರು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಹುದ್ದೆಯಿಂದ ಮುಕ್ತಗೊಳಿಸಿ ಅವರ ಮಾತೃ ಇಲಾಖೆಗೆ ವಾಪಸ್ ಕಳುಹಿಸಿದೆ

ಅಂಕೋಲಾ ತಾಲೂಕಿನ ಬೇಲೇಕೇರಿ ಮೂಲದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿ ಹಲ್ಲೆ ನಡೆಸಿದ್ದ ಅಜಯ್ ಭಂಡಾರ್ಕರ್ ಮೀನುಗಳಿದ್ದ ಬುಟ್ಟಿಯನ್ನು ಚೆಲ್ಲಾಡಿದ್ದ ಆರೋಪ ವ್ಯಕ್ತವಾಗಿತ್ತು. ಇದೇ ವೇಳೆ ತರಕಾರಿ ಮಾರುವ ಮತ್ತೊಬ್ಬ ಮಹಿಳೆಯ ಮೇಲೂ ಹಲ್ಲೆ ನಡೆಸಿರುತ್ತಾರೆ.

ಘಟನೆಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.ಮುಖ್ಯಾಧಿಕಾರಿಯ ವರ್ತನೆಯ ವಿಡಿಯೋ ಸಾಕಷ್ಟು ವೈರಲ್ ಆಗಿ ಮೀನುಗಾರ ಮುಖಂಡರು ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರಕರಣದ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಆಗ್ರಹ ವ್ಯಕ್ತವಾಗಿತ್ತು.

ಘಟನೆಗೆ ಸಂಬಂಧಿಸಿದಂತೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಿಂದ ಆದೇಶ ಹೊರಡಿಸಲಾಗಿದ್ದು ಅಜಯ ಭಂಡಾರ್ಕರ್ ಅವರನ್ನು ಮುಖ್ಯಾಧಿಕಾರಿ ಹುದ್ದೆಯಿಂದ ಬಿಡುಗಡೆ ಮಾಡುವಂತೆ ತಿಳಿಸಲಾಗಿದೆ.

ಹಾಗೂ ಈ ಹಿಂದೆ ಕಾರ್ಯನಿರ್ವಹಿಸುತ್ತಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಮಾಡಿಕೊಳ್ಳುವಂತೆ ಆದೇಶದಲ್ಲಿ ಸೂಚಿಸಲಾಗಿದೆ. ಅಜಯ ಭಂಡಾರ್ಕರ್ ಅವರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು.

 

Related Articles

Back to top button
error: Content is protected !!