ಅ.25ರಂದು ರಜತ ಮಹೋತ್ಸವ ಸಮಿತಿ-ಬಸ್ರೂರು ವಲಯ ಪದ್ಮಶಾಲಿ ಕ್ರಿಯಾ ವೇದಿಕೆ ಅಂತರ್ ವಲಯ ಪದ್ಮಶಾಲಿ ಸಂಘಟನೆಗಳ ಕ್ರೀಡೋತ್ಸವ
Views: 16
ಕನ್ನಡ ಕರಾವಳಿ ಸುದ್ದಿ: ಬಸ್ರೂರು ವಲಯ ಪದ್ಮಶಾಲಿ ಕ್ರಿಯಾವೇದಿಕೆಯ 25ನೇ ವರ್ಷದ ಬೆಳ್ಳಿಹಬ್ಬದ ಅಂಗವಾಗಿ ಅಂತರ್ ವಲಯ ಪದ್ಮಶಾಲಿ ಸಂಘಟನೆಗಳ ಕ್ರೀಡೋತ್ಸವ ಅಕ್ಟೋಬರ್ 25ರಂದು ಬಸ್ರೂರು ಶ್ರೀ ಶಾರದಾ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.
ರಜತೋತ್ಸವ ಸಮಿತಿಯ ಅಧ್ಯಕ್ಷರಾದ ಬಾರ್ಕೂರು ರಂಗನಕೇರಿ ಶ್ರೀನಿವಾಸ ಶೆಟ್ಟಿಗಾರ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.
ದ.ಕ.ಜಿಲ್ಲಾ ಪದ್ಮಶಾಲಿ ಮಹಾಸಭಾ (ರಿ.) ಇದರ ಅಧ್ಯಕ್ಷರಾದ ಶ್ರೀ ರವಿ ಶೆಟ್ಟಿಗಾರ್ ಕಾರ್ಕಳ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ರಜತೋತ್ಸವ ಸಮಿತಿಯ ಅಧ್ಯಕ್ಷರಾಗಿರುವ ಶ್ರೀ ರಾಜೇಂದ್ರ ಶೆಟ್ಟಿಗಾರ್ ಬಸ್ರೂರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದಾರೆ.
ಉದ್ಯಮಿಗಳಾದ ಸುಣ್ಣಾರಿ ಚಂದ್ರಶೇಖರ್ ಶೆಟ್ಟಿಗಾರ್ ಕ್ರೀಡಾ ಜ್ಯೋತಿ ಹಸ್ತಾಂತರಿಸಲಿದ್ದಾರೆ.
ಶ್ರೀ ಸುರೇಶ ಶೆಟ್ಟಿಗಾರ್, ಆಡಳಿತ ಮೊಕ್ತೇಸರರು ಶ್ರೀ ಬ್ರಹ್ಮಲಿಂಗ ವೀರಭದ್ರ ದುರ್ಗಾಪರಮೇಶ್ವರೀ ದೇವಸ್ಥಾನ, ದ.ಕ.ಜಿಲ್ಲಾ ಪದ್ಮಶಾಲಿ ವಿದ್ಯಾವರ್ಧಕ ಸಂಘ (ರಿ.) ಉಡುಪಿ ಅಧ್ಯಕ್ಷರಾದ ಶ್ರೀ ವಿಠಲ ಶೆಟ್ಟಿಗಾರ್ ಸಗ್ರಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಡಾ. ಬಸವರಾಜ್ ಶೆಟ್ಟಿಗಾರ್ ಅಧ್ಯಕ್ಷರು, ಪದ್ಮಶಾಲಿ ಸಮಾಜ ಸೇವಾ ಸಂಘ ಕೋಟೇಶ್ವರ, ಶ್ರೀ ಭಾಸ್ಕರ ಶೆಟ್ಟಿಗಾರ್ ಅಧ್ಯಕ್ಷರು ಪದ್ಮಶಾಲಿ ಸಮಾಜ ಸೇವಾ ಸಂಘ ಸಾಸ್ತಾನ, ಶ್ರೀ ಕರುಣಾಕರ ಶೆಟ್ಟಿಗಾರ್ ಅಧ್ಯಕ್ಷರು ಶೆಟ್ಟಿಗಾರ್ ಸಮಾಜ ಸೇವಾ ಸಂಘ ಅಮಾಸೆಬೈಲು, ಶ್ರೀ ಭಾಸ್ಕರ್ ಶೆಟ್ಟಿಗಾರ್ ಅಧ್ಯಕ್ಷರು, ಪದ್ಮಶಾಲಿ ಸಮಾಜ ಸೇವಾ ಸಂಘ ಬೈಕಾಡಿ, ಬಸ್ರೂರು ಕ್ರಿಯಾ ವೇದಿಕೆಯ ಗೌರವಾಧ್ಯಕ್ಷ ಶ್ರೀ ಗೋಪಾಲಕೃಷ್ಣ ಶೆಟ್ಟಿಗಾರ್, ಶ್ರೀ ಚಂದ್ರಶೇಖರ್ ಶೆಟ್ಟಿಗಾರ್ ಅಧ್ಯಕ್ಷರು ಪದ್ಮಶಾಲಿ ಕ್ರಿಯಾ ವೇದಿಕೆ ಬಸ್ರೂರು ಇವರುಗಳ ಗೌರವ ಉಪಸ್ಥಿತದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ರಜತೋತ್ಸವ ಸಮಿತಿಯ ಕಾರ್ಯದರ್ಶಿ ರವೀಂದ್ರ ಶೆಟ್ಟಿಗಾರ್ ಬಸ್ರೂರು, ಪ್ರಧಾನ ಕಾರ್ಯದರ್ಶಿ ಸುಬ್ಬಯ್ಯ ಶೆಟ್ಟಿಗಾರ್, ಕ್ರೀಡಾ ಸಂಚಾಲಕರಾದ ರಾಘವೇಂದ್ರ ಶೆಟ್ಟಿಗಾರ್, ಸತ್ಯನಾರಾಯಣ ಶೆಟ್ಟಿಗಾರ್, ವಿವೇಕಾನಂದ ಶೆಟ್ಟಿಗಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.






