ಡಿಸೆಂಬರ್ 6ರಂದು ಕುಂದಾಪುರದಲ್ಲಿ ಸುಜ್ಞಾನ ವಿದ್ಯಾರ್ಥಿವೇತನ ಪರೀಕ್ಷೆ
ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ – ಪಿಯುಸಿ ಶಿಕ್ಷಣಕ್ಕೆ ಶೇ.100ರಷ್ಟು ವಿದ್ಯಾರ್ಥಿವೇತನ ಪಡೆಯುವ ಅವಕಾಶ
Views: 139
ಕನ್ನಡ ಕರಾವಳಿ ಸುದ್ದಿ: ಡಾ. ರಮೇಶ್ ಶೆಟ್ಟಿ ಅವರ ನೇತೃತ್ವದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಕುಂದಾಪುರ ವತಿಯಿಂದ ಪ್ರಸ್ತುತ ಸಾಲಿನಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗಾಗಿ ಡಿಸೆಂಬರ್ 6ರಂದು ಕುಂದಾಪುರದ ಯಡಾಡಿ–ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್ನಲ್ಲಿರುವ ಸುಜ್ಞಾನ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ಕನ್ನಡ ಮತ್ತು ಆಂಗ್ಲ ಮಾಧ್ಯಮ ಸೇರಿದಂತೆ ರಾಜ್ಯ ಪಠ್ಯಕ್ರಮ, ಸಿಬಿಎಸ್ಇ ಹಾಗೂ ಐಸಿಎಸ್ಇ ಪಠ್ಯಕ್ರಮಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೂ ಈ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶವಿದೆ.

ಗುಣಮಟ್ಟದ ಶಿಕ್ಷಣಕ್ಕೆ ಹೆಸರಾದ ಸುಜ್ಞಾನ ಸಂಸ್ಥೆ
ಕಳೆದ ಐದು ವರ್ಷಗಳಿಂದ ಕುಂದಾಪುರದಲ್ಲಿ ಗುಣಮಟ್ಟದ ಶಿಕ್ಷಣ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಸುಜ್ಞಾನ ಎಜುಕೇಶನಲ್ ಟ್ರಸ್ಟ್, ಸಿಇಟಿ, ನೀಟ್, ಜೆಇಇ, ಸಿಎ ಮತ್ತು ಸಿಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಮರ್ಥವಾಗಿ ಸಿದ್ಧಪಡಿಸುತ್ತಿದೆ.
ವಿದ್ಯಾರ್ಥಿಗಳನ್ನು ಐಐಟಿ, ವೈದ್ಯಕೀಯ ಕಾಲೇಜುಗಳು ಹಾಗೂ ಕರ್ನಾಟಕದ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜುಗಳಿಗೆ ದಾಖಲಾತಿ ಹಾಗೂ ಸಿಎ/ಎಸ್ ತರಬೇತಿ ಪಡೆಯುವಂತೆ ಪ್ರೇರೇಪಿಸಿ, ಮಾರ್ಗದರ್ಶನ ನೀಡುತ್ತಿರುವ ಸಂಸ್ಥೆಯು ಕಳೆದ ವರ್ಷವೂ ಗಮನಾರ್ಹ ಸಾಧನೆ ಮಾಡಿದೆ.ಸೀಮಿತ ಸಂಖ್ಯೆಯ ವಿದ್ಯಾರ್ಥಿಗಳಿದ್ದರೂ ಸಂಸ್ಥೆಯ ಅನೇಕ ವಿದ್ಯಾರ್ಥಿಗಳು ಎಂಬಿಬಿಎಸ್ ಪ್ರವೇಶ ಪಡೆಯುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.

“ಅವರಲ್ಲಿ ಸಮ್ಮೇದ್ ಪ್ಯಾರಿಸ್ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯೊಂದಿಗೆ ನೀಟ್ (NEET) ಪರೀಕ್ಷೆಯಲ್ಲೂ ALL INDIA RANK 2135 (CATEGORY) ಪಡೆಯುವ ಮೂಲಕ ಬ್ರಹ್ಮಾವರ, ಕುಂದಾಪುರ, ಬೈಂದೂರು ಹಾಗೂ ಹೆಬ್ರಿ ತಾಲೂಕುಗಳ ವ್ಯಾಪ್ತಿಯಲ್ಲಿ ಪ್ರಥಮ ಸ್ಥಾನ ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅಲ್ಲದೆ, ಧನುಷ್ ದೇವಾಡಿಗ, ಜೈರಾಜ್, ರುಮೇಜ್ ಶೇಖ್, ಇಂಚರಾ, ಅಲಿಜಾ ಕರಾಮತುಲ್ಲಾ, ಅರ್ಜುನ್ ಜಿ. ಶೆಟ್ಟಿ ಸೇರಿದಂತೆ ಹಲವು ವಿದ್ಯಾರ್ಥಿಗಳು ಸರ್ಕಾರಿ ಕೋಟಾದಡಿ ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದಿದ್ದಾರೆ.

ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯ ಜೊತೆಗೆ ಪಿಯುಸಿ ಬೋರ್ಡ್ ಪರೀಕ್ಷೆಗಳಿಗೂ ಸಮಗ್ರ ಸಿದ್ಧತೆ ನೀಡಲಾಗುತ್ತಿದೆ. ರಾಜ್ಯದ ಹಾಗೂ ದೇಶದ ವಿವಿಧ ಭಾಗಗಳಿಂದ ಆಗಮಿಸಿರುವ ಅನುಭವಿ ಬೋಧಕ ವೃಂದ ನಿರಂತರವಾಗಿ ಗುಣಮಟ್ಟದ ಶಿಕ್ಷಣವನ್ನು ಒದಗಿಸುತ್ತಿದೆ.
24×7 ವಸತಿ ಸಹಿತ ಶಿಕ್ಷಣ ವ್ಯವಸ್ಥೆ

ಸುಮಾರು 15 ಎಕರೆ ವಿಶಾಲವಾದ ಹಸಿರು ಪರಿಸರದ ವಿದ್ಯಾರಣ್ಯ ಕ್ಯಾಂಪಸ್ನಲ್ಲಿ ಸುಜ್ಞಾನ ಪಿಯು ಕಾಲೇಜು, ವಿದ್ಯಾರಣ್ಯ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೇರಿದಂತೆ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ.
ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ ಪೂರಕವಾಗಿ ಅತ್ಯಾಧುನಿಕ ವಸತಿ ನಿಲಯದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ವಿಶೇಷವಾಗಿ 24×7 ರೆಸಿಡೆನ್ಷಿಯಲ್ ಟೀಚರ್ ವ್ಯವಸ್ಥೆ ಸಂಸ್ಥೆಯ ಪ್ರಮುಖ ವೈಶಿಷ್ಟ್ಯವಾಗಿದೆ. ವಿದ್ಯಾರ್ಥಿಗಳಿಗೆ ಅಧ್ಯಯನದ ಸಂದರ್ಭದಲ್ಲಿ ಯಾವುದೇ ವಿಷಯದಲ್ಲಿ ಸಂಶಯಗಳು ಎದುರಾದರೆ ತಕ್ಷಣವೇ ಪರಿಹರಿಸಿಕೊಳ್ಳಲು ಅನುಕೂಲವಾಗುವಂತೆ ಶಿಕ್ಷಕರು ವಸತಿ ನಿಲಯದಲ್ಲಿಯೇ ವಾಸ್ತವ್ಯವಿದ್ದು ಮಾರ್ಗದರ್ಶನ ನೀಡುತ್ತಾರೆ.
ವಿದ್ಯಾರ್ಥಿವೇತನದ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ
ಸುಜ್ಞಾನ ಎಜುಕೇಶನ್ ಟ್ರಸ್ಟ್ ಕಳೆದ ಹಲವು ವರ್ಷಗಳಿಂದ ವಿದ್ಯಾರ್ಥಿವೇತನ ಪರೀಕ್ಷೆಯನ್ನು ಆಯೋಜಿಸುತ್ತಿದ್ದು, ಈ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಸಂಸ್ಥೆಯಲ್ಲಿ ಪಿಯುಸಿ ಶಿಕ್ಷಣಕ್ಕೆ ದಾಖಲಾಗಿರುವ ಅನೇಕ ವಿದ್ಯಾರ್ಥಿಗಳು ಇಂದು ವೈದ್ಯಕೀಯ ಸೇರಿದಂತೆ ವಿವಿಧ ಉನ್ನತ ಶಿಕ್ಷಣ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ.
ಕಳೆದ ವರ್ಷ ಸುಮಾರು ₹5 ಕೋಟಿ ಮೌಲ್ಯದ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳಿಗೆ ವಿತರಿಸಲಾಗಿದೆ. ಈ ವರ್ಷ ಅದಕ್ಕಿಂತಲೂ ಹೆಚ್ಚಿನ ಮೊತ್ತದ ವಿದ್ಯಾರ್ಥಿವೇತನ ವಿತರಿಸುವ ಗುರಿಯನ್ನು ಸಂಸ್ಥೆ ಹೊಂದಿದೆ.
ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಪಿಯುಸಿ ಶಿಕ್ಷಣದ ಶುಲ್ಕದಲ್ಲಿ ಶೇ.100, ಶೇ.75, ಶೇ.50 ಹಾಗೂ ಶೇ.25ರಷ್ಟು ವಿದ್ಯಾರ್ಥಿವೇತನ ಪಡೆಯುವ ಅವಕಾಶವಿದೆ. ಪರೀಕ್ಷೆ ಬರೆಯುವ ಪ್ರತಿಯೊಬ್ಬರಿಗೂ ವಿದ್ಯಾರ್ಥಿವೇತನ ದೊರೆಯದಿದ್ದರೂ, ಪ್ರತಿಭಾವಂತ ಹಾಗೂ ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿವೇತನ ನೀಡುವುದು ಸಂಸ್ಥೆಯ ಉದ್ದೇಶವಾಗಿದೆ.
ವಿದ್ಯಾರ್ಥಿಗಳೇ, ಈ ಅವಕಾಶವನ್ನು ಸದ್ಬಳಕೆ ಮಾಡಿಕೊಳ್ಳಿ!
ಪ್ರಸ್ತುತ ಸಾಲಿನಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳು ಈ ವಿದ್ಯಾರ್ಥಿವೇತನ ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ.
ಆದ್ದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಈ ಸುವರ್ಣಾವಕಾಶವನ್ನು ಸದ್ಬಳಕೆ ಮಾಡಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿಕೊಂಡು, ಡಿಸೆಂಬರ್ 6ರಂದು ಯಡಾಡಿ–ಮತ್ಯಾಡಿಯ ವಿದ್ಯಾರಣ್ಯ ಕ್ಯಾಂಪಸ್ನ ಸುಜ್ಞಾನ ಪಿಯು ಕಾಲೇಜಿನಲ್ಲಿ ನಡೆಯಲಿರುವ ವಿದ್ಯಾರ್ಥಿವೇತನ ಪರೀಕ್ಷೆಯಲ್ಲಿ ಭಾಗವಹಿಸುವಂತೆ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷರಾದ ಡಾ. ರಮೇಶ್ ಶೆಟ್ಟಿ, ಕಾರ್ಯದರ್ಶಿಯಾದ ಪ್ರತಾಪ್ ಚಂದ್ರ ಶೆಟ್ಟಿ ಹಾಗೂ ಖಜಾಂಚಿಯಾದ ಭರತ್ ಶೆಟ್ಟಿ ಅವರು ಮನವಿ ಮಾಡಿದ್ದಾರೆ.
ನಿಮ್ಮ ಪ್ರತಿಭೆಗೆ ಪ್ರೋತ್ಸಾಹ, ನಿಮ್ಮ ಕನಸಿಗೆ ಸುಜ್ಞಾನದ ಬೆಂಬಲ!
ಪರೀಕ್ಷೆಗೆ ಹಾಜರಾಗುವವರಿಗೆ ಸೂಚನೆ:

ಪ್ರಸಕ್ತ ಸಾಲಿನಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿರುವ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳು ಹಾಗೂ CBSE/ICSE ಪಠ್ಯಕ್ರಮದ ವಿದ್ಯಾರ್ಥಿಗಳು ಈ ಪರೀಕ್ಷೆ ಬರೆಯಬಹುದು. ಆಯಾಯ ಪಠ್ಯಕ್ರಮಕ್ಕೆ ಅನುಗುಣವಾಗಿ 100 ಅಂಕಕ್ಕೆ ಪರೀಕ್ಷೆ ನಡೆಯಲಿದ್ದು,ಪರೀಕ್ಷೆಯು ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್,ಸಮಾಜ ವಿಜ್ಞಾನ ವಿಷಯಗಳನ್ನು ಒಳಗೊಂಡಿರುತ್ತದೆ. ಪರೀಕ್ಷೆಗೆ ಬರುವಾಗ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್, ಪೆನ್ನು, ಪೆನ್ಸಿಲ್ ತರುವುದು ಕಡ್ಡಾಯವಾಗಿದೆ.
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮತ್ತು ಪೋಷಕರು ಈ ಸುವರ್ಣ ಅವಕಾಶವನ್ನು ಬಳಸಿಕೊಂಡು, ತಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲಗೊಳಿಸಬೇಕೆಂದು ಸಂಸ್ಥೆಯು ವಿನಂತಿಸಿಕೊಂಡಿದೆ.
ವಿದ್ಯಾರ್ಥಿ ವೇತನ ಪರೀಕ್ಷೆ ನಡೆಯುವ ದಿನಾಂಕ ಡಿಸೆಂಬರ್ 6, ಭಾನುವಾರ
ಸ್ಥಳ: ಸ್ಥಳ: ಸುಜ್ಞಾನ ಪಿಯು ಕಾಲೇಜು, ವಿದ್ಯಾರಣ್ಯ ಕ್ಯಾಂಪಸ್, ಯಡಾಡಿ-ಮತ್ಯಾಡಿ
ದಿನಾಂಕ: ಡಿಸೆಂಬರ್ 6, ಭಾನುವಾರ
ಸಮಯ: ಬೆಳಿಗ್ಗೆ10 ಗಂಟೆಗೆ
ಸ್ಥಳ: ಸುಜ್ಞಾನ ಪಿಯು ಕಾಲೇಜು, ವಿದ್ಯಾರಣ್ಯ ಕ್ಯಾಂಪಸ್, ಯಡಾಡಿ-ಮತ್ಯಾಡಿ
ನೋಂದಣಿಗಾಗಿ ಸಂಪರ್ಕಿಸಿ
6366976744/ 9964291755/ 8217527362






