ಇತರೆ

6 ಕೋಟಿ ಐಷಾರಾಮಿ ಕಾರು ಡಿಕ್ಕಿಯಾಗಿ ಯುವತಿ ಸಾವು: ರಾಜ್ಯಸಭೆ ಸದಸ್ಯ ಲಿಂಗಮನೇನಿ ರಮೇಶ್ ಪುತ್ರನ ವಿರುದ್ಧ ಪ್ರಕರಣ 

Views: 40

ಕನ್ನಡ ಕರಾವಳಿ ಸುದ್ದಿ: 6 ಕೋಟಿ ಮೌಲ್ಯದ ಐಷಾರಾಮಿ Aston Martin ಕಾರು ಡಿಕ್ಕಿಯಾಗಿ 26 ವರ್ಷದ ಯುವತಿ ದಾರುಣವಾಗಿ ಮೃತಪಟ್ಟಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಅತಿವೇಗ ಹಾಗೂ ಅಜಾಗರೂಕ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನುವ ಆರೋಪ ಕೇಳಿಬಂದಿದೆ.

ಮೃತ ಮಹಿಳೆಯನ್ನು ಭಾರತಿ ಮುಖಿ ಎಂದು ಗುರುತಿಸಲಾಗಿದೆ. ಅವರು ಮಾಧಾಪುರದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದರು.

ಭಾರತಿ ಮುಖಿ ಅವರು ಕೆಲಸದ ಸ್ಥಳದ ಸಮೀಪ ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ Aston Martin ಕಾರು ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಅವರು ಮೃತಪಟ್ಟಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ 21 ವರ್ಷದ ಲಿಂಗಮನೇನಿ ಸಂಜುಶ್ ವಿರುದ್ಧ ಪ್ರಕರಣ ದಾಖಲಾಗಿದೆ. ಅತಿವೇಗ ಹಾಗೂ ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ ಆರೋಪದ ಮೇಲೆ ತನಿಖೆ ನಡೆಸುತ್ತಿದೆ.

ಆರೋಪಿ ಸಂಜುಶ್‌, ಆಂಧ್ರಪ್ರದೇಶದ ಉದ್ಯಮಿ ಹಾಗೂ ರಾಜ್ಯಸಭೆ ಸದಸ್ಯ ಲಿಂಗಮನೇನಿ ರಮೇಶ್ ಅವರ ಪುತ್ರ ಎಂದು ತಿಳಿದುಬಂದಿದೆ. ಲಿಂಗಮನೇನಿ ರಮೇಶ್ ಅವರು ಆಂಧ್ರಪ್ರದೇಶದ ಡಿಸಿಎಂ ಪವನ್ ಕಲ್ಯಾಣ್‌ ಅವರ ಜನಸೇನಾ ಪಕ್ಷದ ರಾಜ್ಯಸಭೆ ಸದಸ್ಯರಾಗಿದ್ದಾರೆ ಎಂದು ವರದಿಯಾಗಿದೆ.

ಅಪಘಾತದ ಬಳಿಕ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಕಾರಿನ ವೇಗ, ಚಾಲನೆಯ ಪರಿಸ್ಥಿತಿ ಹಾಗೂ ಅಪಘಾತಕ್ಕೆ ಕಾರಣವಾದ ಅಂಶಗಳ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

 

 

Related Articles

Back to top button
error: Content is protected !!