ಸಾಂಸ್ಕೃತಿಕ

60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಬ್ಯೂನಸ್ ಐರಿಸ್ ಬ್ಯೂಟಿ ಕ್ವೀನ್

Views: 33

ಅರ್ಜೆಂಟೀನಾ: ಸಾಮಾನ್ಯವಾಗಿ ಮಿಸ್ ವರ್ಲ್ಡ್, ಮಿಸ್ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುವುದನ್ನು ನಾವೆಲ್ಲಾ ನೋಡಿರುತ್ತೇವೆ. ಆದರೆ ಇಲ್ಲೊಬ್ಬಳು ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಬ್ಯೂನಸ್ ಐರಿಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ ಎಂದರೆ ನಂಬಲು ಸಾಧ್ಯವೆ? ಹೌದು, ಇದು ನಂಬಲು ಅಸಾಧ್ಯ ಎನಿಸಿದರೂ ಸತ್ಯ.

ತನ್ನ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್ ಶಾಕ್ ಆಗಿದ್ದಾರೆ. ಹೌದು, ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಕೂಡ ಪಡೆದುಕೊಂಡಿದ್ದಾರೆ.

ಅರ್ಜೆಂಟೀನಾದ ಬ್ಯೂನಸ್ ಐರಿಸ್ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಅಲೆಜಾಂಡ್ರಾ ಮಾರಿಸಾ ರೊಡ್ರಿಗಸ್ ಅವರ ಬಗ್ಗೆ ಸಾಕಷ್ಟು ಮಾತುಕತೆ ನಡೆಯುತ್ತಿದೆ. ಈ ಮೂಲಕ ನೆಟ್ಟಿಗರ ಗಮನವನ್ನು ತನ್ನತ್ತ ಸೆಳೆದಿದ್ದಾರೆ

Related Articles

Back to top button
error: Content is protected !!