ಯುವಜನ

7-8 ವರ್ಷಗಳ ಪ್ರೀತಿ, ಮದುವೆ ಹೆಸರಿನಲ್ಲಿ ಲೈಂಗಿಕ ದೌರ್ಜ್ಯನ್ಯ: ಇಂಜಿನಿಯರ್ ವಿರುದ್ದ  ಶಿಕ್ಷಕಿ ದೂರು 

Views: 23

ಕನ್ನಡ ಕರಾವಳಿ ಸುದ್ದಿ :ಮದುವೆಯಾಗುವುದಾಗಿ ನಂಬಿಸಿ ಪ್ರೀತಿಸಿ, 7-8 ವರ್ಷಗಳ ಕಾಲ ಲೈಂಗಿಕ ಸಂಪರ್ಕ ಮಾಡಿ ವಂಚಿಸಿದ ಆರೋಪದ ಮೇಲೆ ಇಂಜಿನಿಯರ್ ವಿರುದ್ದ ಅತಿಥಿ ಶಿಕ್ಷಕಿಯೊಬ್ಬರು ದೂರು ದಾಖಲಿಸಿದ್ದಾರೆ

ದೇವದುರ್ಗ ಮೂಲದ ಮಲ್ಲಿಕಾರ್ಜುನ್ ಮತ್ತು ಮಹಿಳೆ. ಕಾಲೇಜು ದಿನಗಳಿಂದಲೇ ಜೊತೆಯಲ್ಲಿದ್ದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು.

ಹೀಗೆ ಸುಮಾರು 7-8 ವರ್ಷಗಳ ಕಾಲ ಪ್ರೇಮ ಸಂಬಂಧದಲ್ಲಿದ್ದು, ಮಂತ್ರಾಲಯ, ಆಲಮಟ್ಟಿ ಡ್ಯಾಂ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಓಡಾಡಿದ್ದರು ಎನ್ನಲಾಗಿದೆ. ಅಷ್ಟೆ ಅಲ್ಲದೆ ಮಹಿಳೆಗೆ ತಾನು ನಿನ್ನನ್ನೇ ಮದುವೆಯಾಗುತ್ತೇನೆಂದು ನಂಬಿಸಿದ್ದ ಮಲ್ಲಿಕಾರ್ಜುನ್, ಹಲವು ಬಾರಿ ಬಲವಂತವಾಗಿ ಲೈಂಗಿಕ ಸಂಪರ್ಕ ಬೆಳೆಸಿದ್ದ.

ಆದರೆ, ಇದೀಗ ಇಬ್ಬರೂ ಬೇರೆ ಬೇರೆ ಜಾತಿಯವರೆಂದು ಹೇಳಿದ ಇಂಜಿನಿಯರ್, ಇನ್ನೂ ಹತ್ತು ಹಲವು ಕುಂಟು ನೆಪಗಳನ್ನು ಹೇಳಿ ಮದುವೆಯಾಗಲು ನಿರಾಕರಿಸಿದ್ದಾನೆ.

ಇನ್ನು ನ್ಯಾಯಕ್ಕಾಗಿ ಮಹಿಳೆ ಠಾಣೆ ಮೆಟ್ಟಿಲೇರಿದ್ದು, ಫೋಟೋ, ಆಡಿಯೋ, ವಿಡಿಯೋ ಹಾಗೂ ಮೆಸೇಜ್‌ಗಳೊಂದಿಗೆ ದೂರು ಸಲ್ಲಿಸಿದ್ದಾರೆ. ಸದ್ಯ ರಾಯಚೂರು ಮಹಿಳಾ ಠಾಣೆಯಲ್ಲಿ ಮಲ್ಲಿಕಾರ್ಜುನ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಈ ಕುರಿತು ರಾಯಚೂರು ಎಸ್ ಪಿ ಅರುಣಾಂಗ್ಲು ಗಿರಿ ಪ್ರತಿಕ್ರಿಯಿಸಿ, ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಯುತ್ತಿದೆ. 7-8 ವರ್ಷಗಳ ಸಂಬಂಧದ ಬಗ್ಗೆ ವಿವರಗಳ ಪರಿಶೀಲನೆ ನಡೆಯುತ್ತಿದ್ದು, ಸತ್ಯಾಸತ್ಯತೆ ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Related Articles

Back to top button
error: Content is protected !!