ಧಾರ್ಮಿಕ

ಕೋಟೇಶ್ವರ ಕೊಡಿ ಹಬ್ಬ: ಧ್ವಜಾರೋಹಣದ ಮೂಲಕ ಚಾಲನೆ

Views: 0

ಕೋಟೇಶ್ವರ:ಸಪ್ತ ಕ್ಷೇತ್ರಗಳಲ್ಲಿ ವಿಶಿಷ್ಟ ಸ್ಥಾನ ಹೊಂದಿದ ಧ್ವಜಪುರ ಕೋಟೇಶ್ವರ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನಲ್ಲೇ ಪ್ರಸಿದ್ಧ ಪುಣ್ಯಕ್ಷೇತ್ರವಾಗಿದೆ. ಪರಶುರಾಮ ಸೃಷ್ಟಿಯ ಪುರಾಣ ಪುಣ್ಯಕ್ಷೇತ್ರಗಳಲ್ಲಿ ಮಧ್ಯಮ ಕ್ಷೇತ್ರವೆಂದು ಪುರಾಣ ಕಾಲದಲ್ಲಿ ಧ್ವಜಪುರವೆಂದೂ ವರ್ತಮಾನ ಕಾಲದಲ್ಲಿ ಕೋಟೇಶ್ವರ ವೆಂದು ಪ್ರಸಿದ್ಧವಾದ ಈ ಕ್ಷೇತ್ರದಲ್ಲಿ ಇದೇ ನ. 27 ರಂದು ಕೋಡಿ ಹಬ್ಬದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮ ಇಂದು ನ.21ರಂದು ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು.

ದೇವಾಲಯದ ಪ್ರಧಾನ ಅರ್ಚಕ ಪ್ರಸನ್ನ ಕುಮಾರ್ ಐತಾಳ್ ಪೂಜಾ ಕಾರ್ಯಕ್ರಮ ನಡೆಸಿಕೊಟ್ಟರು.

ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಭಾಕರ ಶೆಟ್ಟಿ.ಮತ್ತು ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಧ್ವಜಾರೋಹಣ ನೆರವೇರಿದ ನಂತರ ಕೊಡಿ ಹಬ್ಬದವರೆಗೆ ಯಾರೂ ಕ್ಷೇತ್ರ ಬಿಟ್ಟು ಹೊರಗೆ ಹೋಗುವಂತಿಲ್ಲ ಎಂಬ ನಂಬಿಕೆ ಇವತ್ತಿಗೂ ಇದೆ.

Related Articles

Back to top button
error: Content is protected !!