ಇತರೆ
ಆಸ್ತಿ ವಿವಾದ: ಗ್ರಾಮ ಪಂಚಾಯತಿ ಸದಸ್ಯನನ್ನು ಕೊಚ್ಚಿ ಕೊಂದು ಹಾಕಿದ ಹಂತಕರು

Views: 0
ಹುಬ್ಬಳ್ಳಿ: ಗ್ರಾಮ ಪಂಚಾಯತಿ ಸದಸ್ಯನನ್ನು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಂದಿರೋ ಘಟನೆ ನಡೆದಿದೆ. ಆಸ್ತಿ ವಿಚಾರಕ್ಕೆ ಈ ಕೊಲೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇನ್ನು, ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಬಗಡಗೇರಿ ಗ್ರಾಮದಲ್ಲಿ ಈ ಕೃತ್ಯ ಎಸಗಲಾಗಿದೆ. ಗ್ರಾಮ ಪಂಚಾಯತಿ ಸದಸ್ಯ ನಿಂಗಪ್ಪ ದಾಸಪ್ಪನವರ ಕೊಲೆಯಾದ ವ್ಯಕ್ತಿ.
ಆಸ್ತಿ ವಿಚಾರವಾಗಿ ಮೃತ ದುರ್ದೈವಿ ಮತ್ತು ಹಂತಕರ ನಡುವೆ ಮಾತುಕತೆ ನಡೆದಿದೆ. ಮಾತಿಗೆ ಮಾತು ಬೆಳೆದು ತಾರಕಕ್ಕೇರಿದಾಗ ಹಂತಕರು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಂದಿದ್ದಾರೆ. ಕೊಂದು ಸ್ಥಳದಿಂದ ಕೂಡಲೇ ಹಂತಕರು ಪರಾರಿಯಾಗಿದ್ದಾರೆ.
ಸದ್ಯ ಘಟನಾ ಸ್ಥಳಕ್ಕೆ ಕಲಘಟಗಿ ಪೊಲೀಸರ ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸ್ರು ಈಗ ಆರೋಪಿಗಾಗಿ ಬಲೆ ಬೀಸಿದ್ದಾರೆ.







