ಸಾಂಸ್ಕೃತಿಕ

ಬೆಂಗಳೂರು ಸಿಲಿಕಾನ್ ಸಿಟಿ ಕಂಬಳಕ್ಕೆ ಅದ್ಧೂರಿ ಚಾಲನೆ

Views: 1

ಬೆಂಗಳೂರು, ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಸಿಲಿಕಾನ್ ಸಿಟಿಯಲ್ಲಿ ಕಂಬಳಕ್ಕೆ ಅದ್ದೂರಿ ಚಾಲನೆ ದೊರೆತಿದ್ದು, ಬಹು ನಿರೀಕ್ಷಿತ ಹೊತ್ತಿಗೆ ಸಭಾ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಅಶ್ವಿನಿ ಪುನೀತ್ ರಾಜ್ ಕುಮಾರ್ ಉದ್ಘಾಟಿಸಿದರು.ಇಂದು ಬೆಳಗ್ಗೆ ರಾಜ ಮಹರಾಜ ಹೆಸರಿನ ಕಂಬಳ ಕೆರೆಗೆ ಅರ್ಚಕರು ಧಾರ್ಮಿಕ ವಿಧಿವಿಧಾನ ನೆರವೇರಿಸಿದರು. ದೈವ, ದೇವರ ಪ್ರಸಾದ ಕಂಬಳ ಕರೆಯ ನೀರಿಗೆ ಅರ್ಪಣೆ ಮಾಡಿದರು. ಯಾವುದೇ ಅಡ್ಡಿ ಆತಂಕ ಎದುರಾಗದಂತೆ ಪ್ರಾರ್ಥಿಸಿದರು.ಅನಂತರ, ದೀಪ ಬೆಳಗಿಸಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಜೋಡು ಕರೆ ಉದ್ಘಾಟನೆ ಮಾಡಿದರೆ, ಹೊತ್ತಿಗೆ ಸಭಾ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿಗಳಾದ ಬಿ. ಎಸ್ ಯಡಿಯೂರಪ್ಪ, ಡಿ.ವಿ.ಸದಾನಂದ ಗೌಡ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಅಶೋಕ್ ರೈ, ಗುರು ಕಿರಣ್ , ಶಾಸಕ ಗುರ್ಮೆ ಪ್ರಕಾಶ್ ಶೆಟ್ಟಿ ಸೇರಿದಂತೆ ಪ್ರಮುಖರು ಗಂಗಾರತಿ ಮಾಡುವ ಮೂಲಕ ಕಂಬಳ ಕರೆಗೆ ಪೂಜೆ ನೆರವೇರಿಸಿದರು.ಪೂರ್ಣ ಪ್ರಮಾಣದ ಕಂಬಳದ ಉದ್ಘಾಟನೆ ಸಿಎಂ ಸಿದ್ದರಾಮಯ್ಯ ಅವರು ಮುಖ್ಯ ಸಭಾ ಕಾರ್ಯಕ್ರಮದಲ್ಲಿ ಅವರು ಚಾಲನೆ ನೀಡಲಿದ್ದಾರೆ. ಹಲವು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದ್ದು, ವಿವಿಧ ಕ್ಷೇತ್ರದ ಗಣ್ಯ ವ್ಯಕ್ತಿಗಳು ಭಾಗಿಯಾಗುತ್ತಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರಾವಳಿಯ ಜಾನಪದ ಕ್ರೀಡೆಯನ್ನು ಕಣ್ತುಂಬಿಕೊಳ್ಳಲು ಜನಸಾಗರವೇ ಹರಿದು ಬಂದಿದ್ದು, ಕಂಬಳ ಹಲವು ವಿಶೇಷಗಳೊಂದಿಗೆ ಮೇಳೈಸುತ್ತಿದೆ. ರಾಜಧಾನಿಯ ಜನ ಜೋಡಿ ಕೋಣಗಳ ಮಿಂಚಿನ ಓಟಕ್ಕೆ ಸಾಕ್ಷಿಯಾಗಲಿದ್ದಾರೆ.ಅರಮನೆ ಮೈದಾನದ ಗೇಟ್ ನಂಬರ್, ಒಂದು, ಎರಡು, ಮೂರು ಹಾಗೂ ನಾಲ್ಕರಲ್ಲಿ ಸಾರ್ವಜನಿಕರಿಗೆ ಪ್ರವೇಶ ನೀಡಲಾಗುತ್ತಿದೆ. ಇನ್ನು ಕಂಬಳ ವೀಕ್ಷಿಸಲು ವಿಐಪಿಗಳಿಗೆ ಪ್ರತ್ಯೇಕ ಆಸನದ ವ್ಯವಸ್ಥೆ ಮಾಡಲಾಗಿದೆ.ರಾಜ- ಮಹಾರಾಜ ಕಂಬಳದಲ್ಲಿ ಮಿಂಚಿನ ಓಟದಲ್ಲಿ ಓಡಿ ಪ್ರಶಸ್ತಿ ಮುಡಿಗೇರಿಸಲು 200 ಜೋಡಿ ಕೋಣಗಳು ಸಜ್ಜಾಗಿವೆ.ಅರಮನೆ ಮೈದಾನದ ಗೇಟ್ ನಂಬರ್ 1,2,3ಹಾಗೂ 4ರಲ್ಲಿ ಸಾರ್ವಜನಿಕರಿಗೆ ಎಂಟ್ರಿ ನೀಡಲಾಗಿದೆ. ಯಾವುದೇ ಪಾಸ್ ಬೇಕಿಲ್ಲ. ವಿಐಪಿಗಳಿಗೆ ಪ್ರತ್ಯೇಕ ಪಾಸ್ ವ್ಯವಸ್ಥೆ ಕಲ್ಪಿಸಲಾಗಿದ್ದು, ಫನ್ ವರ್ಲ್ಡ್ ಕಡೆಯಿಂದ ಪ್ರವೇಶ ಮಾಡಲು ಅವಕಾಶ ನೀಡಲಾಗಿದೆ.ಕಂಬಳ ನೋಡಲು ಜನರಿಗೆ ಗ್ಯಾಲರಿ ವ್ಯವಸ್ಥೆ ಮಾಡಲಾಗಿದ್ದು, ಏಕಕಾಲಕ್ಕೆ 6ರಿಂದ 7 ಸಾವಿರ ಜನರು ಗ್ಯಾಲರಿಯಲ್ಲಿ ಕುಳಿತುಕೊಂಡು ಕಂಬಳ ನೋಡಬಹುದು.

ಬೆಂಗಳೂರು ಕಂಬಳದಲ್ಲಿ 200 ಜೋಡಿ ಕೋಣಗಳು ಭಾಗಿಯಾಗುತ್ತಿವೆ. 228 ಕೋಣಗಳ ಜೋಡಿ ರಿಜಿಸ್ಟ್ರೇಷನ್ ಆಗಿದ್ದ200 ಜೋಡಿ ಫೈನಲ್ ಆಗಿದೆ.

ಬೆಂಗಳೂರು ಕಂಬಳದ ಮುಖ್ಯ ವೇದಿಕೆಗೆ ಪುನೀತ್ ರಾಜ್ ಕುಮಾರ್ ಹೆಸರು ಇಡಲಾಗಿದೆ.

ಕಂಬಳದ ಕರೆಗೆ ರಾಜ ಮಹಾರಾಜ ಹಾಗೂಸಾಂಸ್ಕೃತಿಕ ವೇದಿಕೆಗೆ ನಾಲ್ವಡಿ ಕೃಷ್ಣರಾಜ ಒಡೆಯರ್ ಹೆಸರಿಡಲಾಗಿದೆ.ಕಂಬಳದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮದ ವೈಭವವಿದ್ದು, ಕರಾವಳಿಯ ಸಾಂಪ್ರದಾಯಿಕ ಹುಲಿ ಕುಣಿತ ಕೂಡ ಇರಲಿದೆ.

ಕಂಬಳದ ವೇಳೆ ಪ್ರಾಣಿ ರಕ್ಷಣಾ ಕಾಯ್ದೆಯನ್ನು ಅನುಸರಿಸಲಾಗುತ್ತದೆ. ಆಹಾರ, ನೀರಿನ ಬಗ್ಗೆ ಕೋಣಗಳ ಮಾಲೀಕರು ವಿಶೇಷ ಕಾಳಜಿ ವಹಿಸಿದ್ದಾರೆ. ಕೋಣಗಳಿಗೆ ಬೈಹುಲ್ಲು, ಕುಡಿಯುವ ನೀರು ಊರಿನಿಂದಲೇ ತರಲಾಗುತ್ತದೆ. ಯಾಕೆಂದರೆ ಆಹಾರ ಬದಲಾದರೆ ಕೋಣಗಳ ಆರೋಗ್ಯ ಏರುಪೇರು ಆಗುವ ಸಾಧ್ಯತೆ ಇದೆ.

ಸಾಮಾನ್ಯವಾಗಿ ಕಂಬಳ ಕೋಣಗಳು ಓಡುವ ಟ್ರ್ಯಾಕ್ 147 ಮೀಟರ್ ಉದ್ದ ಇರುತ್ತದೆ. ಆದರೆ ಬೆಂಗಳೂರು ಕಂಬಳದ ಟ್ರ್ಯಾಕ್ 155 ಮೀಟರ್ ಉದ್ದವಿದ್ದು, ಕಂಬಳದ ಇತಿಹಾಸದಲ್ಲಿ ಹೊಸ ಚರಿತ್ರೆ ಸೃಷ್ಟಿಸಲಿದೆ.ಕಂಬಳದ ಸ್ಥಳದಲ್ಲಿ ಪಶುವೈದ್ಯರು, ನಾಟಿ ವೈದ್ಯರು ಸದಾ ಲಭ್ಯರಿದ್ದಾರೆ.

ವಿಜೇತರಿಗೆ ಬಹುಮಾನಗಳೇನೇನು?

ಗೆದ್ದ ಕೋಣಗಳಿಗೆ ಪ್ರಥಮ ಬಹುಮಾನ 16 ಗ್ರಾಂ ಚಿನ್ನ ಹಾಗೂ 1ಲಕ್ಷ ನಗದು ಎರಡನೇ ಬಹುಮಾನ 8 ಗ್ರಾಂ ಚಿನ್ನ ಹಾಗು 50000 ನಗದು ಮೂರನೇ ಬಹುಮಾನ 4 ಗ್ರಾಂ ಚಿನ್ನ ಹಾಗೂ25000 ನಗದು ಸಿಗಲಿದೆ.ಜತೆಗೆ, ಕಂಬಳ ಓಡಿಸುವವರಿಗೆ ಕೂಡ ವಿಶೇಷ ಬಹುಮಾನ ಇರಲಿದೆ.

ಹುತಾತ್ಮ ಯೋಧನಿಗೆ ಗೌರವ..!

ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ನಡೆದ ಕಾದಾಟದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಪ್ರಾಂಜಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

Related Articles

Back to top button
error: Content is protected !!