ಸಾಂಸ್ಕೃತಿಕ
ಡಿ.5-6ರಂದು ಕೋಟದಲ್ಲಿ ಉಡುಪಿ ಜಿಲ್ಲಾ 16ನೇ ಸಾಹಿತ್ಯ ಸಮ್ಮೇಳನ

Views: 0
ಕೋಟ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ ಆಶ್ರಯದಲ್ಲಿ ಉಡುಪಿ ಜಿಲ್ಲಾ 16ನೇ ಸಾಹಿತ್ಯ ಸಮ್ಮೇಳನ ಕೋಟ ವಿವೇಕ ವಿದ್ಯಾಸಂಘದ ಸಹಕಾರದಲ್ಲಿ, ಕೋಟದ ವಿವೇಕ ವಿದ್ಯಾಲಯದ ಆವರಣದಲ್ಲಿ ಡಿ.5-6ರಂದು ಜರಗಲಿದೆ ಎಂದು ಕ.ಸಾ.ಪ. ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ತಿಳಿಸಿದ್ದಾರೆ.
ಕೋಟದಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಪ್ರಯುಕ್ತ ಡಿ.5ರಂದು ಸಾಲಿ ಗ್ರಾಮ ಗುರುನರಸಿಂಹ ದೇಗುಲದಿಂದ ಕೋಟ ವಿವೇಕ ವಿದ್ಯಾಸಂಸ್ಥೆ ತನಕ ಪುರಮೆರವಣಿಗೆ ನಡೆಯಲಿದ್ದು, ಬೆಳಗ್ಗೆ 10.30ಕ್ಕೆ ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಸಮ್ಮೇಳನಕ್ಕೆ ಚಾಲನೆ ನೀಡಲಿರುವರು ಎಂದರು.
ಡಿ.6ರಂದು ಬೆಳಗ್ಗೆ 10ಗಂಟೆಗೆ ಕವಿಗೋಷ್ಠಿ, ಸಮ್ಮೇಳನಾಧ್ಯಕ್ಷರೊಂದಿಗೆ ಒಂದಷ್ಟು ಹೊತ್ತು ಮಾತು-ಕತೆ, ಶಿಕ್ಷಣ, ಶಿಕ್ಷಕ -ವ್ಯವಸ್ಥೆ ವಿಚಾರಗೋಷ್ಠಿ, ಅಪರಾಹ್ನ 1.30ಕ್ಕೆ ಚಿಣ್ಣರ ಜಗುಲಿ ಬಹುವಿಧ ಗೋಷ್ಠಿ ಅನಂತರ ಯಕ್ಷಗಾನ ಪ್ರಸಂಗದ ಕುರಿತು ವಿಚಾರಗೋಷ್ಠಿ ಅಪರಾಹ್ನ 3ಕ್ಕೆ ಬಹಿರಂಗ ಅವೇಶನ, ವಿವಿಧ ಕ್ಷೇತ್ರದ ಸಾಧಕರಿಗೆ ಸಮ್ಮಾನ, ಸಮಾರೋಪ ನಡೆಯಲಿದೆ ಎಂದು ತಿಳಿಸಿದರು.






