ಕರಾವಳಿಯಲ್ಲಿ ಗುಡುಗು-ಸಿಡಿಲು ಸಹಿತ ಭಾರೀ ಮಳೆಗೆ ಜನ ತತ್ತರ

Views: 0
ಉಡುಪಿ, ನವೆಂಬರ್ ರಾಜ್ಯದಲ್ಲಿ ಹಿಂಗಾರು ಮಳೆಯ ಆರ್ಭಟ ಜೋರಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ತಮಿಳುನಾಡು ಹಾಗೂ ಕೇರಳ ಭಾಗದ ಸಮುದ್ರ ಮೇಲ್ಮೈ ಮಟ್ಟಕ್ಕಿಂತ 3.1 ಕಿಲೋ ಮೀಟರ್ ಸುಳಿಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಎಲ್ಲೆಡೆ ಮಳೆಯಾಗುತ್ತಿದೆ.
ಉಡುಪಿ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಸಾಧಾರಣೆ ಮಳೆಯುತ್ತಿದೆ. ಇನ್ನು ಬೆಳಗ್ಗಿನಿಂದಲೂ ಮೋಡ ಕವಿದ ವಾತಾವಣ ಇದ್ದು, ಸಂಜೆ ಏಕಾಏಕಿ ಗುಡುಗು ಸಿಡಿಲಿನೊಂದಿಗೆ ಮಳೆಯಾಗಿದೆ.
ಉಡುಪಿ, ಮಣಿಪಾಲ,ಮಲ್ಪೆ, ಪರ್ಕಳ, ಕುಂದಾಪುರ, ಬೀಜಾಡಿ, ಗೋಪಾಡಿ, ತೆಕ್ಕಟ್ಟೆ ಬಸ್ರೂರು, ಹಾಲಾಡಿ,ಶಂಕನಾರಾಯಣ, ಕಲ್ಲೂರು ಗಂಗೊಳ್ಳಿ, ತ್ರಾಸಿ ಇನ್ನಿತರ ಕಡೆಗಳಲ್ಲಿ ಶನಿವಾರ ಸಂಜೆ ಸುರಿದ ಮಳೆಯಿಂದ ಜನರು ತೊಂದರೆ ಅನುಭವಿಸುವಂತಾಗಿದೆ.
ಮಂಗಳೂರಿನಲ್ಲಿ 33.6 ಡಿಸೆ ಗರಿಷ್ಠ ಉಷ್ಣಾಂಶ 24.2 ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕರಾವಳಿಯ ಕೆಲವು ಗಡೆಗಳಲ್ಲಿ ಇನ್ನೂ ಕೂಡ ಮುಂಗಾರು ಹಂಗಾಮಿನ ಕಟಾವು ಕಾರ್ಯ ಮುಗಿಯದೆ ಇರುವುದರಿಂದ ಮಳೆಯಿಂದಾಗಿ ರೈತರು ತೊಂದರೆ ಅನುಭವಿಸುವಂತಾಗಿದೆ.
ವೀಕೆಂಡ್‌ನಲ್ಲಿ ಮಳೆಯಾಗುತ್ತಿದ್ದು ಹಲವು ಕಾರ್ಯಕ್ರಮಗಳಿಗೆ ತೊಂದರೆಯಾಗಿದೆ.
ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಯಕ್ಷಗಾನ ಬಯಲಾಟಗಳು ಹಾಗೂ ಭೂತಕೋಲ, ಜಾತ್ರೆಗಳು ಆರಂಭವಾಗಿದ್ದು ಜನರ ಸಂಭ್ರಮಕ್ಕೆ ಮಳೆ ಅಡ್ಡಿಯಾಗುತ್ತಿದೆ. ಇನ್ನು ಹಲವು ದೇವಸ್ಥಾನಗಳಲ್ಲಿ ದೀಪೋತ್ಸವಗಳನ್ನು ಆಯೋಜಿಸಲಾಗಿದ್ದು, ಮಳೆಯ ಬಗ್ಗೆ ಆತಂಕ ಹೆಚ್ಚಾಗಿದೆ. ಇನ್ನು ಇಂದು ಕೂಡ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆ ತುಸು ದುರ್ಬಲಗೊಂಡರು ಸಹಿತ ಮತ್ತೆ ಡಿಸೆಂಬರ್ 1ರವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇನ್ನು ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದ್ದು, ತೊಂಡೆಭಾವಿ, ಧರ್ಮಸ್ಥಳ, ಸೋಮವಾರಪೇಟೆ, ವಿರಾಜಪೇಟೆ, ಗೌರಿಬಿದನೂರು, ಅರಕಲಗೂಡು, ಬಂಡೀಪುರ, ಕೊಣನೂರು, ಕುಣಿಗಲ್ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.
ಇನ್ನು ರಾಜ್ಯದಲ್ಲಿ ಹಿಂಗಾರು ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬಳ್ಳಾರಿಯಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಕಳೆದ ಒಂದು ವಾರದಿಂದಲೂ ಮೋಡ ಕವಿದ ವಾತಾವರಣವಿದ್ದು, ಕೆಲವು ಭಾಗಗಳಲ್ಲಿ ಸಾಧರಣೆ ಮಳೆಯಾದರೆ, ಇನ್ನುಕೆಲವು ಭಾಗಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಂಗಳೂರಿನ ಎಚ್ಎಎಲ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.