ಇತರೆ
ಕೊಚ್ಚಿ: ಓಪನ್ ‘ಟೆಕ್ ಫೆಸ್ಟ್’ನಲ್ಲಿ ಕಾಲ್ತುಳಿತ; 4 ವಿದ್ಯಾರ್ಥಿಗಳು ಸಾವು,64 ಮಂದಿ ಗಾಯ

Views: 35
ಕೊಚ್ಚಿಯ ಓಪನ್ ಏರ್ ‘ಟೆಕ್ ಫೆಸ್ಟ್’ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 64 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ.
ಮೃತರನ್ನು ಅತುಲ್ ತಂಬಿ, ಆನ್ ರುಫ್ತಾ, ಸಾರಾ ಥಾಮಸ್ ಮತ್ತು ಅಲ್ವಿನ್ ಜೋಸೆಫ್ ಎಂದು ಗುರುತಿಸಲಾಗಿದೆ. ಅಲ್ವಿನ್ ಹೊರತುಪಡಿಸಿ ಉಳಿದ ಮೂವರು CUSAT ನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದರು.
CUSAT ಆಯೋಜಿಸಿದ ವಾರ್ಷಿಕ ಟೆಕ್ ಉತ್ಸವದ ಎರಡನೇ ದಿನವಾದ ನಿನ್ನೆ 1000–1500 ಆಸನ ಸಾಮರ್ಥ್ಯದ ಸಭಾಂಗಣದಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಭಾಂಗಣ ಭಾಗಶಃ ತುಂಬಿತ್ತು. ಈ ವೇಳೆ ಹಠಾತ್ತನೆ ಮಳೆ ಸುರಿದಿದ್ದರಿಂದ ನೆರೆದಿದ್ದ ವಿದ್ಯಾರ್ಥಿಗಳು ಆಶ್ರಯ ಪಡೆಯಲು ಸಭಾಂಗಣದತ್ತ ಓಡಲಾರಂಭಿಸಿದರು. ಈ ವೇಳೆ ನೂಕು ನುಗ್ಗಲು ಸಂಭವಿಸಿ ದುರಂತ ಉಂಟಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ (ಎಡಿಜಿಪಿ) ಎಂ.ಆರ್ ಅಜಿತ್ ಕುಮಾರ್ ತಿಳಿಸಿದ್ದಾರೆ.








