ಯುವಜನ

ರಾಷ್ಟ್ರೀಯ ರನ್ನಿಂಗ್ ರೇಸ್‌ನಲ್ಲಿ ಬಹುಮಾನ ಬರಲಿಲ್ಲ; ಪುತ್ತೂರು ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

Views: 0

ಮಂಗಳೂರು: ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಸಿಗಲಿಲ್ಲ ಎಂದು ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸಂಪ್ಯದಲ್ಲಿ ನಡೆದಿದೆ. ನಿಶಾ (17) ಮೃತ ವಿದ್ಯಾರ್ಥಿನಿ.

ಮೃತ ವಿದ್ಯಾರ್ಥಿನಿ ನಿಶಾ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕಳೆದ ಒಂದು ವಾರದ ಹಿಂದೆ ವಿಷ ಸೇವಿಸಿದ್ದಳು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಕಳೆದ ಎರಡು ವಾರಗಳ ಹಿಂದೆ ಬಿಹಾರದಲ್ಲಿ ರಾಷ್ಟ್ರಮಟ್ಟದ ಕ್ರೀಡಾಕೂಟ ನಡೆದಿತ್ತು. ನಿಶಾ ರನ್ನಿಂಗ್ ರೇಸ್‌ನಲ್ಲಿ ಭಾಗವಹಿಸಿದ್ದರು. ಅದರಲ್ಲಿ ಬಹುಮಾನ ಸಿಗದಿದ್ದಕ್ಕೆ ನಿಶಾ ಬೇಸರಗೊಂಡಿದ್ದಾಳೆ. ಬಳಿಕ ಖಿನ್ನತೆಗೆ ಒಳಗಾಗಿ ತೋಟಕ್ಕೆ ಸಿಂಪಡಿಸುವ ಕೀಟನಾಶಕವನ್ನು ಸೇವಿಸಿದ್ದಾಳೆ.

ಪರಿಣಾಮ ತೀವ್ರ ವಾಂತಿ ಬಂದ ಕಾರಣಕ್ಕೆ ಮನೆಯವರು ವಿಚಾರಿಸಿದಾಗ ಕೀಟನಾಶಕ ಸೇವಿಸಿದ ವಿಚಾರ ಬೆಳಕಿಗೆ ಬಂದಿದೆ. ಕೂಡಲೇ ಮನೆಯವರು ಆಕೆಯನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ ಒಂದುವಾರದಿಂದ ನಿಶಾ ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾಳೆ. ಸದ್ಯ ಈ ಕುರಿತು ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್​​ ದಾಖಲಿಸಲಾಗಿದೆ.

 

Related Articles

Back to top button
error: Content is protected !!