ರಾಜಕೀಯ

ಸಂವಿಧಾನ ದಿನಾಚರಣೆ :ಸರಿಯಾದ ಕೈಗಳಲ್ಲಿ ಸಂವಿಧಾನವಿದ್ದರೆ ಅದರ ಉದ್ದೇಶಗಳು ಸಾರ್ಥಕ:ಸಿಎಂ

Views: 0

ಬೆಂಗಳೂರು,- ಎಲ್ಲರಿಗೂ ಹಕ್ಕುಗಳ ರಕ್ಷಣೆ ಹಾಗೂ ಮಾನವೀಯತೆ ಸಂವಿಧಾನದ ಆಶಯ. ಭಾರತದ ಸಂವಿಧಾನ ಅತ್ಯಂತ ಶ್ರೇಷ್ಠ ಸಂವಿಧಾನ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.

ಸರಿಯಾದ ಕೈಗಳಲ್ಲಿ ಸಂವಿಧಾನವಿದ್ದರೆ ಅದರ ಉದ್ದೇಶಗಳು ಸಾರ್ಥಕವಾಗುತ್ತದೆ ಎಂದ ಮುಖ್ಯಮಂತ್ರಿಗಳು, ಸಂವಿಧಾನದ ಧೇಯೋದ್ಧೇಶಗಳನ್ನು ಸಾಧಿಸಬೇಕಾದರೆ ಸಂವಿಧಾನದ ಪರವಾಗಿರುವ ಕೈಗಳಲ್ಲಿ ಸಂವಿಧಾನ ಇರಬೇಕು ಎಂದು ಮಾರ್ಮಿಕವಾಗಿ ಹೇಳಿದರು.

ಸಂವಿಧಾನ ದಿನಾಚರಣೆ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿರುವ ಸಂವಿಧಾನಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ರವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಸಂವಿಧಾನ ಶ್ರೇಷ್ಠವಾದದು. ಸಂವಿಧಾನ ಎಷ್ಟೇ ಶ್ರೇಷ್ಠವಾಗಿದ್ದರೂ ಸರಿಯಾದ ಕೈಗಳಲ್ಲಿ ಸಂವಿಧಾನ ಇರದಿದ್ದರೆ ಸಂವಿಧಾನ ಸಾರ್ಥಕವಾಗುವುದಿಲ್ಲ ಎಂಬ ಡಾ. ಬಿ. ಆರ್. ಅಂಬೇಡ್ಕರ್ ರವರ ಮಾತುಗಳನ್ನು ನೆನಪಿಸಿದ ಮುಖ್ಯಮಂತ್ರಿಗಳು, ಸಂವಿಧಾನದ ಪರವಾಗಿರುವ ಕೈಗಳಲ್ಲಿ ಇದ್ದಾಗ ಮಾತ್ರ ಸಂವಿಧಾನದ ಧ್ಯೇಯೋದೇಶಗಳನ್ನು ಸಾಧಿಸಿದಂತಾಗುತ್ತದೆ ಎಂದರು.

ಇಂದು ಸಂವಿಧಾನ ಅಂಗೀಕಾರವಾದ ದಿನ. ನ. 26 .1946 ರಂದು ಭಾರತದ ಸಂವಿಧಾನ ರಚನಾ ಸಮಿತಿಯ ಅಧ್ಯಕ್ಷರಾಗಿದ್ದ ಡಾ.ಬಿ. ಆರ್. ಅಂಬೇಡ್ಕರ್ ರವರು ಆಗಿನ ರಾಷ್ಟ್ರಪತಿ ಡಾ. ಬಾಬಾ ರಾಜೇಂದ್ರಪ್ರಸಾದ್ ಅವರಿಗೆ ಸಂವಿಧಾನ ಸಲ್ಲಿಸಿದ ದಿನ. ಇದಾದ ನಂತರ ಸಂವಿಧಾನ ಅಂಗೀಕಾರವಾಯಿತು. ಅಂದಿನಿಂದ ಈ ದಿನವನ್ನು ಸಂವಿಧಾನ ದಿನವೆಂದು ಇಡೀ ದೇಶದಲ್ಲಿ ಆಚರಿಸಲಾಗುತ್ತಿದೆ ಎಂದರು.

 

Related Articles

Back to top button
error: Content is protected !!