ಯುವಜನ

ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳದ ಪ್ರೇಮಿಗಳು ಕಾಸರಗೋಡಿನಲ್ಲಿ ಪತ್ತೆ

Views: 0

ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ ಊರಿಗೆ ಕರೆ ತರುವಲ್ಲಿ ಯಶಸ್ವಿಯಾಗಿದ್ದಾರೆ.

ಉದ್ದೊಟ್ಟು ನಿವಾಸಿ ಅಬ್ದುಲ್‌ಹಮೀದ್‌ಅವರ ಪುತ್ರಿ ಆಯಿಸತ್‌ರಸ್ಮಾ(18) ಮತ್ತು ಹೈದರ್‌ಅವರ ಪುತ್ರ ಮಹಮ್ಮದ್‌ಸಿನಾನ್‌ (23) ಅವರು ನ. 23 ರಂದು ತಮ್ಮ ತಮ್ಮ ಮನೆಗಳಲ್ಲಿ ಇದ್ದವರು ನ. 24ರಂದು ಬೆಳಗಾಗುವಷ್ಟರಲ್ಲಿ ಕಾಣೆಯಾಗಿದ್ದರು.

ಮನೆಯವರ ದೂರಿನಂತೆ ಹುಡುಕಾಟ ನಡೆಸಿದ ಬಂಟ್ವಾಳ ಪೊಲೀಸರು ಅವರಿಬ್ಬರನ್ನೂ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿದ್ದು, ಠಾಣೆಗೆ ತಂದು ವಿಚಾರಿಸಿದಾಗ ತಾವಿಬ್ಬರೂ ಪರಸ್ಪರ ಪ್ರೀತಿಸಿದ್ದು, ಮದುವೆಯಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Related Articles

Back to top button
error: Content is protected !!