ಶಿಕ್ಷಣ

ನಿವೃತ್ತಿ ಹಣ ಮಂಜೂರಾತಿಗೆ ಲಂಚಕ್ಕೆ ಬೇಡಿಕೆ ಇಟ್ಟ ಬಿಇಒ ರೆಡ್‌ ಹ್ಯಾಂಡ್‌ ಅರೆಸ್ಟ್

Views: 0

ಧಾರವಾಡ ಜಿಲ್ಲೆಯ ಕುಂದಗೋಳ ಬಿಇಓ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಕುಂದಗೋಳ ಬಿಇಒ ಡಾ.ವಿದ್ಯಾ ಕುಂದರಗಿ ಅವರ ಧಾರವಾಡ ಹೊಯ್ಸಳ ನಗರ ಬಡಾವಣೆಯಲ್ಲಿನ ನಿವಾಸದ ಮೇಲೆ ದಾಳಿ ನಡೆದಿದೆ. ಎಸ್ಪಿ ಸತೀಶ್​ ಚಿಟಗುಬ್ಬಿ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಬಿಇಒ ಕಚೇರಿಯಲ್ಲಿ ಲಂಚ ಪಡೆಯುವಾಗ ಸಿಕ್ಕಿಬಿದ್ದ ಹಿನ್ನೆಲೆಯಲ್ಲಿ ಧಾರವಾಡ ನಿವಾಸಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ನಿವೃತ್ತಿ ಹಣ ಮಂಜೂರಿಗೆ ದಾಖಲೆ ರವಾನಿಸಲು ಹರ್ಲಾಪುರ ಗ್ರಾಮದ ಸರ್ಕಾರಿ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ ಮಂಜುನಾಥ್​ಗೆ 8,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ತಿಳಿದುಬಂದಿದೆ.

ಲಂಚ ಪಡೆಯುವಾಗ ಬಿಇಒ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ. ಈ ಹಿನ್ನೆಲೆ ಧಾರವಾಡ ನಿವಾಸಕ್ಕೆ ದಾಳಿ ಮಾಡಿ ಪರಿಶೀಲನೆ ಮಾಡಿದ್ದಾರೆ.

Related Articles

Back to top button