ಜನಮನ

ಸಿ.ಪಿಯೋಗೇಶ್ವರ್​ ಬಾವ ನಾಪತ್ತೆ ಪ್ರಕರಣಕ್ಕೆ ಟ್ವಿಸ್ಟ್​; ಪತ್ತೆಯಾದ ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆಗಳು, ಸಾಕಷ್ಟು ಅನುಮಾನಗಳು!

Views: 41

ರಾಮನಗರ: ಮಾಜಿ ಸಚಿವ ಸಿ.ಪಿ ಯೋಗೇಶ್ವರ್​ ಅವರ ಬಾವ ಮಹದೇವಯ್ಯ ಕಿಡ್ನಾಪ್ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ. ಇದೀಗ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ಅವರ ಕಾರು ಪತ್ತೆಯಾಗಿದೆ. ಕಾರಿನ ಡಿಕ್ಕಿಯಲ್ಲಿ ರಕ್ತದ ಕಲೆಗಳು ಪತ್ತೆಯಾಗಿದೆ.

ಡಿಸೆಂಬರ್​ 2 ರಂದು ಮಹದೇವಯ್ಯ ಅವರು ತೋಟದ ಮನೆಯಿಂದ ಕಾಣೆಯಾಗಿದ್ದರು. ಇದಕ್ಕೆ ಸಂಬಂಧಿಸಿದಂತೆ ಅವರ ಕಾರು ರಾಮಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ಕಳೆದ ಎರಡು ದಿನಗಳಿಂದ ನಿಂತಿದೆ. ಈ ಹಿನ್ನೆಲೆಯಲ್ಲಿ ಕಾರು ನಿಲ್ಲಿಸಿರುವ ಸ್ಥಳಕ್ಕೆ ರಾಮಾಪುರ ಪೊಲೀಸರು, ಚನ್ನಪಟ್ಟಣ ಡಿವೈಎಸ್‌ಪಿ ಹಾಗೂ ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ವೇಳೆ ಕಾರಿನ ಡಿಕ್ಕಿಯನ್ನು ಓಪನ್ ಮಾಡಿದಾಗ ಅದರಲ್ಲಿ ರಕ್ತದ ಕಲೆಗಳು ಪತ್ತೆಯಾಗಿವೆ. ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತ ತಡರಾತ್ರಿ ಕೂಡ ಸಿಸಿಟಿವಿ ಕ್ಯಾಮೆರಾಗಳನ್ನ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕಾರು ಪತ್ತೆಯಾದಲ್ಲಿಗೆ ಎಫ್‌ಎಸ್‌ಎಲ್ ತಂಡ, ಫಿಂಗರ್ ಫ್ರಿಂಟ್ ಟೀಮ್, ಶ್ವಾನದಳ ಭೇಟಿ ನೀಡಿವೆ. ಸದ್ಯ ರಕ್ತದ ಕಲೆಗಳಿಂದ ಸಾಕಷ್ಟು ಅನುಮಾನಗಳು ಮೂಡುತ್ತಿವೆ. ಈ ಸಂಬಂಧ ರಾಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

Related Articles

Back to top button
error: Content is protected !!