ಆರೋಗ್ಯ

ಆಸ್ಪತ್ರೆಯಲ್ಲಿ ಭ್ರೂಣ ಹತ್ಯೆ ದಂಧೆ ಬಯಲು; ಬ್ರೋಕರ್ ಅಣತಿಯಂತೆ ಅಬಾರ್ಷನ್, ಹೆಡ್ ನರ್ಸ್ ಉಷಾರಾಣಿ ಅರೆಸ್ಟ್‌!

Views: 1

ಮೈಸೂರು: ರಾಜ್ಯದಲ್ಲಿ ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದು ಮತ್ತೊಬ್ಬ ನರ್ಸ್​​ ಅನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಹೆಡ್ ನರ್ಸ್ ಉಷಾರಾಣಿ ಬಂಧನ. ಮೈಸೂರಿನ ಚಾಮುಂಡೇಶ್ವರಿ ಆಸ್ಪತ್ರೆಯಲ್ಲಿ ಕೂಡ ಭ್ರೂಣ ಹತ್ಯೆ ದಂಧೆ ನಡೆಯುತ್ತಿತ್ತು ಎನ್ನುವ ಅಂಶ ಇದೀಗ ಬೆಳಕಿಗೆ ಬಂದಿದೆ. ಪುಟ್ಟರಾಜು ಎನ್ನುವ ಬ್ರೋಕರ್​ ಅಣತಿಯಂತೆ ಮಹಿಳೆಯರಿಗೆ ಅಬಾರ್ಷನ್ ಮಾಡಲಾಗುತ್ತಿತ್ತು. ಒಂದು ತಿಂಗಳಲ್ಲಿ ಆಸ್ಪತ್ರೆಯಲ್ಲಿ ಸಾಕಷ್ಟು ಭ್ರೂಣ ಹತ್ಯೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.

ಬ್ರೋಕರ್ ಪುಟ್ಟರಾಜು ಮಾತಾ ಮತ್ತು ಚಾಮುಂಡೇಶ್ವರಿ ಆಸ್ಪತ್ರೆಗೆ ಮಹಿಳೆಯರನ್ನು ಕರೆದುಕೊಂಡು ಹೋಗುತ್ತಿದ್ದನು. ಚಾಮುಂಡೇಶ್ವರಿ ಆಸ್ಪತ್ರೆ ನರ್ಸ್ ಆಗಿರುವ ಉಷಾರಾಣಿ, ಗರ್ಭಿಣಿಯರಿಗೆ ಅಬಾರ್ಷನ್ ಮಾಡುತ್ತಿದ್ದಳು ಎಂದು ದೂರು ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ನರ್ಸ್​ ಅನ್ನು ಅರೆಸ್ಟ್ ಮಾಡಿದ್ದಾರೆ. ಇನ್ನು ಆಸ್ಪತ್ರೆಯ ಮಾಲೀಕ ಜಗದೀಶ್​ಗೆ ನೋಟಿಸ್ ನೀಡಿರುವ ಪೊಲೀಸರು ಆಸ್ಪತ್ರೆಯ ದಾಖಲಾತಿಗಳನ್ನು ನೀಡುವಂತೆ ತಿಳಿಸಲಾಗಿದೆ.

Related Articles

Back to top button