ಜನಮನ

ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬಾವ ಮಹದೇವಯ್ಯ ಶವ ಚಾಮರಾಜನಗರದಲ್ಲಿ ಪತ್ತೆ : ಕೊಲೆ ಶಂಕೆ!

Views: 0

ಚನ್ನಪಟ್ಟಣ: ಬಿಜೆಪಿ ನಾಯಕ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಬಾವ ಮಹದೇವಯ್ಯ ಶುಕ್ರವಾರ ನಾಪತ್ತೆಯಾಗಿದ್ದು, ಅವರು ಮೃತಪಟ್ಟಿರುವುದು ಖಚಿತವಾಗಿದೆ. ಶವ ಚಾಮರಾಜನಗರದ ಹನೂರು ತಾಲೂಕಿನ ರಾಮಾಪುರ ಗ್ರಾಮದಲ್ಲಿ ಪತ್ತೆಯಾಗಿದೆ.

ರಾಮಾಪುರದ ನಿರ್ಜನ ಪ್ರದೇಶದಲ್ಲಿ ಮಹದೇವಯ್ಯ ಅವರ ಶವ ಸಿಕ್ಕಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಶವರ ಸ್ಥಿತಿ ನೋಡಿದರೆ ಕೊಲೆಯಾಗಿರುವುದು ದೃಢಪಟ್ಟಿದೆ.

ಮಹದೇವಯ್ಯ ನಾಪತ್ತೆಯಾಗಿರುವ ಬಗ್ಗೆ ಸಾಕಷ್ಟು ಅನುಮಾನಗಳು ವ್ಯಕ್ತವಾಗಿದ್ದವು. ಸೋಮವಾರ ಬೆಳಗ್ಗೆ ಅವರ ಕಾರು ಪತ್ತೆಯಾಗಿದ್ದು, ಅದರಲ್ಲಿ ರಕ್ತದ ಕಲೆಗಳು ಇರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಮಹದೇವಯ್ಯ ಅವರು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದರು. ಇದೀಗ ಚಾಮರಾಜನಗರದ ರಾಮಾಪುರದ ನಿರ್ಜನ ಪ್ರದೇಶವೊಂದರಲ್ಲಿ ಮಹದೇವಯ್ಯ ಅವರ ಶವ ಪತ್ತೆಯಾಗಿದೆ.

ನಡೆದಿದ್ದೇನು?: ಡಿ.1ರ ಮಧ್ಯರಾತ್ರಿ ಮಹದೇವಯ್ಯ ಅವರು ಚನ್ನಪಟ್ಟಣ ತೋಟದ ಮನೆಯಲ್ಲಿದ್ದರು. ಮಧ್ಯರಾತ್ರಿ 12 ಗಂಟೆಗೆ ತೋಟದ ಮನೆಗೆ ನುಗ್ಗಿದ ಮೂವರು ಅಪರಿಚಿತರು, ಬಳಿಕ ಮನೆಯಲ್ಲಿ ಲಾಕರ್ ಓಪನ್ ಮಾಡಿಸಿ ಪತ್ರ ದುಡ್ಡು ಕೊಂಡೊಯ್ದಿದ್ದರು ಎನ್ನಲಾಗಿದೆ.

ಮಹದೇವಯ್ಯ ಅವರನ್ನು ಹಂತಕರು ಚನ್ನಪಟ್ಟಣದಿಂದ ಕಾರಿನಲ್ಲೇ ಕರೆದುಕೊಂಡು ಚಾಮರಾಜನಗರ ಜಿಲ್ಲೆಗೆ ಬಂದಿದ್ದಾರೆ. ಬಳಿಕ ಕೊಳ್ಳೇಗಾಲದ ಬಳಿ ಹಂತಕರು ಡಾಬಾದಲ್ಲಿ ಪಾರ್ಟಿ ಮಾಡಿದ್ದಾರೆ. ಅದೇ ಮಾರ್ಗದ ಅಂಗಡಿಯಲ್ಲಿ ನೀರಿನ ಬಾಟ್ಲಿ ಖರೀದಿ ಸಹ ಮಾಡಿದ್ದಾರೆ. ಬಳಿಕ ಹನೂರು ತಾಲೂಕಿ ನಾಲಾರೋಡ್ ಬಳಿಗೆ ಬಂದು ಕೊಲೆ ಮಾಡಿ ಅರಣ್ಯ ಪ್ರದೇಶದಲ್ಲಿ ಮೃತದೇಹವನ್ನು ಬಿಸಾಡಿ ಬೆಳಗ್ಗೆ 5 ಗಂಟೆಗೆ ಹನೂರಿನ ರಾಮಾಪುರದಲ್ಲಿ ಕಾರು ನಿಲ್ಲಿಸಿರುವ ಹಂತಕರು, ಡಿ.2ರ ಬೆಳಗ್ಗೆ 5.15ಕ್ಕೆ ರಾಮಾಪುರದ ಮುಖ್ಯರಸ್ತೆಯಲ್ಲಿ ಟೀ ಕುಡಿದು ಹೋಗಿರುವುದು ಪೊಲೀಸರ ತನಿಖೆಯಲ್ಲಿ ಕಂಡುಬಂದಿದೆ.

ಕೃತ್ಯಕ್ಕೆ ಸಂಬಂಧಿಸಿದ ಎಲ್ಲ ಸಿಸಿ ಕ್ಯಾಮೆರಾಗಳ ದೃಶ್ಯಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Related Articles

Back to top button
error: Content is protected !!