ಜನಮನ

ಚರಂಡಿಯಲ್ಲಿ ತೇಲಿ ಬಂದ 2 ವರ್ಷದ ಹೆಣ್ಣು   ಮಗುವಿನ ಶವ ಪತ್ತೆ!

Views: 0

ಕೋಲಾರ: ಚರಂಡಿ ಮೋರಿಯಲ್ಲಿ 2 ವರ್ಷದ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿದೆ. ಬೆಂಗಳೂರು ಗ್ರಾಮಾಂತರದ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಬಳಿಯ ಮೋರಿಯಲ್ಲಿ ಪತ್ತೆಯಾಗಿದೆ. ಚಾಪೆ ಹಾಕಿ ಮಗುವನ್ನು ಮಲಗಿಸಿದ ರೀತಿಯಲ್ಲಿ ಮಗು ಪತ್ತೆಯಾಗಿದೆ. ಆದರೆ ಮಗುವಿನ ದೇಹದ ಮೇಲೆ ಯಾವುದೇ ಗಾಯದ ಗುರುತು ಕಂಡು ಬಂದಿಲ್ಲ. ಇದು ಕೊಲೆಯೊ ಅಥವಾ ಸಹಜ ಸಾವುವೋ ತಿಳಿದು ಬಂದಿಲ್ಲ. ಮಗುವಿನ ಮೃತದೇಹ ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರಿಂದ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

Related Articles

Back to top button
error: Content is protected !!