ಶಿಕ್ಷಣ

ಶಾಲಾ ಮೈದಾನದಲ್ಲಿ ಶಿಕ್ಷಣೇತರ ಚಟುವಟಿಕೆ ನಿರ್ಬಂಧ, ಸುತ್ತೋಲೆ

Views: 15

ಬೆಂಗಳೂರು, ಶಾಲಾ ಮೈದಾನ ಮತ್ತು ಆವರಣವನ್ನು ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಬಳಕೆ ಮಾಡಿಕೊಳ್ಳಬೇಕು ಎಂದು ಕರ್ನಾಟಕದ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಬಿ.ಬಿ.ಕಾವೇರಿ, ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸುರಕ್ಷತಾ ಕ್ರಮಗಳನ್ನು ಅನುಸರಿಸುವ ಕುರಿತು ಎಂಬ ವಿಷಯವನ್ನು ಸುತ್ತೋಲೆ ಒಳಗೊಂಡಿದೆ.

ಈ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯದ ಎಲ್ಲಾ ಸರ್ಕಾರಿ/ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳನ್ನು ಹೊರತುಪಡಿಸಿ ಇನ್ನಿತರ ಯಾವುದೇ ಚಟುವಟಿಕೆಗಳಿಗೆ ಬಳಸಿಕೊಳ್ಳುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಲಾಗಿರುತ್ತದೆ

Related Articles

Back to top button