ಅತಿಥಿ ಉಪನ್ಯಾಸಕರ ಖಾಯಂಗೆ ಆಗ್ರಹಿಸಿ ಧರಣಿ: ವಿದ್ಯಾರ್ಥಿಗಳ ಶೈಕ್ಷಣಿಕ ಹಿನ್ನಡೆ

Views: 0
ಬೀದರ್::ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಹಲವಾರು ವರ್ಷಗಳಿಂದ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತವವರ ಸೇವೆಯನ್ನು ಖಾಯಂಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರದಿಂದ ಅತಿಥಿ ಉಪನ್ಯಾಸಕರು ಅನಿರ್ದಿಷ್ಟ ಅವಧಿ ಧರಣಿ ಆರಂಭಿಸಿದರು.
ಹತ್ತಾರು ವರ್ಷಗಳಿಂದ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ ಲಕ್ಷಾಂತರ ಮಕ್ಕಳ ಭವಿಷ್ಯವನ್ನು ರೂಪಿಸಿದ್ದೇವೆ ಆದರೆ ಜೀವನಕೊಂದು ಭದ್ರತೆ ಇಲ್ಲದಂತಾಗಿ ನಮ್ಮ ಭವಿಷ್ಯವೇ ಮಂಕು ಕವಿದೆ ಎಷ್ಟೋ ಕುಟುಂಬಗಳು ಆರ್ಥಿಕ ಸಂಕಷ್ಟ ಸಿಲುಕಿವೆ ಆದ್ದರಿಂದ ಕೂಡಲೇ ಖಾಯಂಮಾತಿಗೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು ಅತಿಥಿಉಪನ್ಯಾಸಕರು ಹೋರಾಟ ಆರಂಭಿಸಿ ಕಾಲೇಜಿಗೆ ಗೈರು ಹಾಜರಾಗುತ್ತಿದ್ದಿರುವುದರಿಂದ ರಾಜ್ಯಾದ್ಯಂತ ಓದುತ್ತಿರುವ ಲಕ್ಷಾಂತರ ಮಕ್ಕಳಿಗೆ ತರಗತಿಗಳು ನಡೆಯುತ್ತಿಲ್ಲ ಇದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಹಿನ್ನಡೆಯಾಗುತ್ತಿದೆ ಎಂದು ತಿಳಿಸಿದ್ದಾರೆ.
ಬಹಳ ವರ್ಷಗಳಿಂದ ಸರ್ಕಾರಿ ಕಾಲೇಜುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅತಿಥಿಉಪನ್ಯಾಸಕರ ಸರ್ಕಾರಿ ನೇಮಕಾತಿಗೆ ನಿಗದಿ ಪಡಿಸಿದ ವಯೋಮಿತಿ ಮೀರಿರುವುದರಿಂದ ಬೇರೆ ಉದ್ಯೋಗಗಳಿಗೂ ಹೋಗಲು ಸಾಧ್ಯವಾಗುತ್ತಿಲ್ಲ ಇಲ್ಲಿಯೇ ಅವರು ಭವಿಷ್ಯ ಕಟ್ಟಿಕೊಳ್ಳಬೇಕಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ ಸೇವೆ ಖಾಯಂಮಾತಿಗೊಳಿಸಬೇಕು ಎಂದು ಆಗ್ರಹಿಸಿ ಈಗಾಗಲೇ ಹಲವು ಬಾರಿ ಹೋರಾಟ ಮಾಡಿದ್ದೇವೆ ಸರ್ಕಾರದ ಗಮನವನ್ನು ಸೆಳೆದಿದ್ದೇವೆ.
ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಸಮಸ್ಯೆಗೆ ಸ್ಪಂದಿಸುವ ಭರವಸೆಯನ್ನು ಕಾಂಗ್ರೆಸ್ ನೀಡಿತ್ತು ಕೂಡಲೇ ನಮ್ಮ ಬೇಡಿಕೆ ಈಡೇರಿಸಬೇಕೆಂದು ಆಗ್ರಹಿಸಿದರು. ರಾಜ್ಯ ಅತಿಥಿ ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಅನಿಲ್ ಕುಮಾರ ಶಿಂಧೆ, ಬಾ.ಧನರಾಜ್, ವೆಂಕಟ್ ಜಾಧವ್, ಬಸವರಾಜ್ ಸೇರಿ, ಬಾಲಾಜಿ, ವನಿತಾ ಬಾಂಗೆ, ಆಶಾ ಅಶ್ವಿನಿ, ಡಾಕ್ಟರ್ ಮಹೇಶ್ವರಿ ಹೆಡೆ, ಗಂಗೂ ಗಾಯತ್ರಿ, ಸಂಗೀತ, ಶಾಲಿನಿ, ಮತ್ತಿತ್ತರು ಪಾಲ್ಗೊಂಡಿದ್ದರು