ಕರಾವಳಿ

ಪುತ್ತೂರು: ಡಿಆರ್‌ಡಿಒ ಯುವ ವಿಜ್ಞಾನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Views: 55

ಮಂಗಳೂರು: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಹೈದರಾಬಾದ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವ ವಿಜ್ಞಾನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಭರತ್ ಕಲ್ಲರ್ಪೆ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಪುತ್ತೂರಿನ ಕಲ್ಲರ್ಪೆ ನಿವಾಸಿಯಾಗಿದ್ದ. DRDO ಹೈದರಾಬಾದ್ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ತಾತ್ಕಾಲಿಕ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ.

ಎರಡು ತಿಂಗಳ ಹಿಂದೆಯಷ್ಟೇ ಉದ್ಯೋಗಕ್ಕೆ ಭರತ್‌ ಸೇರಿಕೊಂಡಿದ್ದ. ಕಳೆದ ಒಂದು ವಾರದ ಹಿಂದೆ ಊರಿಗೆ ಬಂದಿದ್ದ. ಸಂಸ್ಥೆಗೆ ರಾಜೀನಾಮೆ ಪತ್ರ ನೀಡಿದ್ದರೂ ರಾಜೀನಾಮೆ ಸ್ವೀಕಾರ ಮಾಡಿರಲಿಲ್ಲ. ನಿನ್ನೆ ರಾತ್ರಿ DRDO ಕಚೇರಿಯಿಂದ ಫೋನ್ ಬಂದಿತ್ತು. ಆ ಬಳಿಕ ಇಂದು (ಶುಕ್ರವಾರ) ಬೆಳಗ್ಗೆ ನೇಣು‌ ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button