ಶಿಕ್ಷಣ

ಕುಂದಾಪುರದ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಸಮಾರಂಭ

Views: 3

ಕುಂದಾಪುರ: ಇಲ್ಲಿನ ಆರ್.ಎನ್.ಶೆಟ್ಟಿ ಪದವಿ ಪೂರ್ವ ಕಾಲೇಜು ವಾರ್ಷಿಕೋತ್ಸವ ಸಮಾರಂಭ ಇತ್ತೀಚೆಗೆ ನಡೆಯಿತು.

” ವಿದ್ಯಾರ್ಥಿಗಳು ದಿನನಿತ್ಯದ ಜೀವನದಲ್ಲಿ ಮಾಡುವ ಚಟುವಟಿಕೆಗಳಲ್ಲೇ ಕಾರ್ಯಸಂಸ್ಕ್ರತಿಯನ್ನು ಬೆಳೆಸಿಕೊಳ್ಳಬೇಕು. ತಮಗೆ ಸಂಬಂಧಿಸಿದ ಎಲ್ಲ ಕೆಲಸಗಳನ್ನು ತಾವೇ ಮಾಡಿಕೊಂಡು ಸ್ವಾವಲಂಬನೆ ಬೆಳೆಸಿಕೊಳ್ಳುವುದನ್ನು ವಿದ್ಯಾರ್ಥಿ ಹಂತದಿಂದಲೇ ರೂಢಿ ಮಾಡಿಕೊಳ್ಳಬೇಕು ಹಾಗೂ ತಾವು ಯಾವುದೇ ವೃತ್ತಿಯನ್ನು ಕೈಗೊಂಡರೂ ಅದನ್ನು ಶೃದ್ಧೆಯಿಂದ ಮಾಡಬೇಕು ” ಎಂದು ಕುಂದಾಪುರದ ಆರ್.ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ, ಕೆ.ಎ.ಎಸ್, ಎಡಿಶನಲ್ ಕಮೀಶನರ್, ಬಿ.ಬಿ.ಎಮ್.ಪಿ, ಬೆಂಗಳೂರು- ಇವರು ಅಭಿಪ್ರಾಯ ಪಟ್ಟರು.

ಕಾಲೇಜಿನ ಸಂಚಾಲಕರೂ, ಬೈಂದೂರಿನ ಮಾಜಿ ಶಾಸಕರೂ ಆದ ಶ್ರೀ. ಬಿ. ಎಮ್ ಸುಕುಮಾರ್ ಶೆಟ್ಟಿಯವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಆಡಳಿತ ಮಂಡಳಿಯಾದ ಕುಂದಾಪುರ ಎಜುಕೇಶನ್ ಸೊಸೈಟಿಯ ಜೊತೆ ಕಾರ್ಯದರ್ಶಿ ಶ್ರೀ ಸುಧಾಕರ ಶೆಟ್ಟಿ ಭಾಂಡ್ಯ, ಸದಸ್ಯರಾದ ಶ್ರೀ‌ ಅರುಣ್ ಕುಮಾರ್ ಶೆಟ್ಟಿ ಮತ್ತು ಡಾ. ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಉಮೇಶ್ ಶೆಟ್ಟಿಯವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ‌ ಪ್ರಾಂಶುಪಾಲರಾದ ಶ್ರೀ ನವೀನ ಕುಮಾರ ಶೆಟ್ಟಿಯವರು ವಾರ್ಷಿಕ ವರದಿಯನ್ನು ವಾಚಿಸಿದರು. ಹಿಂದಿ ವಿಭಾಗದ ಮುಖ್ಯಸ್ಥೆ ಜಯಶೀಲಾ ಪೈ ಯವರು ಶೈಕ್ಷಣಿಕ, ಸಾಂಸ್ಕ್ರತಿಕ, ಕ್ರೀಡಾ ಕ್ಷೇತ್ರದ ಸಾಧಕ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮವನ್ನು ನಿರ್ವಹಿಸಿದರು. ವಾಣಿಜ್ಯ ಶಾಸ್ತ್ರ ವಿಭಾಗ ಮುಖ್ಯಸ್ಥೆ ಶ್ರೀಮತಿ ಸುಷ್ಮಾ ಶೆಣೈ, ಗಣಿತ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಶುಭಾ ಎಮ್, ರಸಾಯನ ಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಜಾನೀಸ್ ನತಾಶಾ ಡಿಸೋಜಾ ಹಾಗೂ ಜೀವಶಾಸ್ತ್ರ ವಿಭಾಗ ಮುಖ್ಯಸ್ಥೆ ಶ್ರೀಮತಿ ಅಕ್ಷತಾ ಕೆ. ಎನ್ ರವರು ವಿವಿಧ ಬಹುಮಾನ ವಿತರಣಾ ಕಾರ್ಯಕ್ರಮವನ್ನು ನಿರ್ವಹಿಸಿದರು.

ವಿದ್ಯಾರ್ಥಿನಿಯರಾದ ಸೌಮ್ಯ ಶೆಟ್ಟಿ ಅತಿಥಿಗಳನ್ನು ಸ್ವಾಗತಿಸಿದರು, ನಮೃತಾ ಧನ್ಯವಾದ ಸಲ್ಲಿಸಿದರು. ಶೈಮಾ ಅತಿಥಿ ಪರಿಚಯ ಮಾಡಿದರು. ರಿಶೆಲ್ ಮತ್ತು ಮೇಘನಾ ಇವರು ಕಾರ್ಯಕ್ರಮ ನಿರೂಪಿಸಿದರು.

Related Articles

Back to top button