ಜನಮನ

ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ; ರಾಜ್ಯದ ಈ ಜಿಲ್ಲೆಗಳಲ್ಲಿ 2-3 ದಿನ ಮಳೆಯ ಎಚ್ಚರಿಕೆ…!

Views: 1

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಹಿನ್ನಲೆ ರಾಜ್ಯದಲ್ಲಿ ಮುಂದಿನ ಎರಡ್ಮೂರು ದಿನ ಮಳೆಯ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡಿನ ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿಯಲ್ಲಿ ಡಿ.17ರಿಂದ ಡಿ.19ರವರೆಗೆ ಮಳೆಯಾಗಲಿದೆ.

ಇನ್ನೂ ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಡಿ.18ರಂದು ಸಾಧಾರಣ ಮಳೆಯಾಗಲಿದೆ. ವಾತಾವರಣ ಬದಲಾವಣೆಯಿಂದ ಭಾನುವಾರವೂ ಸಹ ಹಲವು ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಚಂಡಮಾರುತವೋ ಎಂಬ ಬಗ್ಗೆ ಸ್ಪಷ್ಟತೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ತಿಳಿಸಿದೆ.

Related Articles

Back to top button
error: Content is protected !!