ಸಾಂಸ್ಕೃತಿಕ

ವಿಜಯ್ ದೇವರಕೊಂಡಗೆ ಲವ್ ಮೆಸೇಜ್ ಕೊಟ್ರಾ ರಶ್ಮಿಕಾ? ಇದೀಗ ಪೋಸ್ಟ್ ವೈರಲ್…

Views: 1

ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಇಬ್ಬರು ಪ್ರೀತಿಸುತ್ತಿದ್ದಾರೆ ಎಂಬ ರೂಮರ್ಸ್ ಹಲವು ವರ್ಷಗಳಿಂದ ಹರಿದಾಡ್ತಿದೆ. ಇದೀಗ ರಶ್ಮಿಕಾ ಮಾಡಿರುವ ಪೋಸ್ಟ್ ವೈರಲ್ ಆಗುತ್ತಿದೆ.

ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಸೌತ್ ಸಿನಿಮಾಗಳಲ್ಲಿ ಮಿಂಚಿದ ಬಳಿಕ ಬಾಲಿವುಡ್ನಲ್ಲಿ ಶೈನ್ ಆಗ್ತಿದ್ದಾರೆ. ಇತ್ತೀಚೆಗಷ್ಟೇ ರಶ್ಮಿಕಾ ನಟಿಸಿದ್ದ ಅನಿಮಲ್ ಸಿನಿಮಾ ಬಿಡುಗಡೆಯಾಗಿ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಸೃಷ್ಟಿಸಿತ್ತು.ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಸೌತ್ ಸಿನಿಮಾಗಳಲ್ಲಿ ಮಿಂಚಿದ ಬಳಿಕ ಬಾಲಿವುಡ್ನಲ್ಲಿ ಶೈನ್ ಆಗ್ತಿದ್ದಾರೆ.

ಇತ್ತೀಚೆಗಷ್ಟೇ ರಶ್ಮಿಕಾ ನಟಿಸಿದ್ದ ಅನಿಮಲ್ ಸಿನಿಮಾ ಬಿಡುಗಡೆಯಾಗಿ ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಸೃಷ್ಟಿಸಿತ್ತು.ಸಿನಿಮಾಗಳ ಜೊತೆಗೆ ರಶ್ಮಿಕಾ ಮಂದಣ್ಣ ಲವ್ ಲೈಫ್ ವಿಚಾರಕ್ಕೂ ಭಾರೀ ಸುದ್ದಿಯಲ್ಲಿದ್ದಾರೆ. ರಶ್ಮಿಕಾ ಮಂದಣ್ಣ ಹಾಗೂ ತೆಲುಗು ನಟ ವಿಜಯ್ ದೇವರಕೊಂಡ ಇಬ್ಬರು ಪ್ರೀತಿಸುತ್ತಿದ್ದಾರೆ ಎಂಬ ಸುದ್ದಿ ಹರಿದಾಡ್ತಿದೆ.

ಇಬ್ಬರೂ ಆಗಾಗ ಫಾರಿನ್ ಟ್ರಿಪ್ ಮಾಡ್ತಿದ್ದಾರೆ. ಇಬ್ಬರು ಒಂದೇ ಪ್ಲೇಸ್ ನಲ್ಲಿರುವ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಇದೇ ವೇಳೆ ನಟಿ ರಶ್ಮಿಕಾ ಇನ್ ಸ್ಟಾಗ್ರಾಂ ಪೇಜ್ನಲ್ಲಿ ಹಾಕಿರುವ ಪೋಸ್ಟ್ ವೈರಲ್ ಆಗುತ್ತಿದೆ.

ನನ್ನ ಜೀವನದಲ್ಲಿ ಬಂದಿದ್ದಕ್ಕಾಗಿ ಧನ್ಯವಾದಗಳು’ ಎಂದು ರಶ್ಮಿಕಾ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ ವಿಜಯ್ ದೇವರಕೊಂಡ ಅವರಿಗಾಗಿ ಎಂದು ಹಲವರು ಕಮೆಂಟ್ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಪೋಸ್ಟ್ ಸಖತ್ ವೈರಲ್​ ಆಗ್ತಿದೆ. ಇತ್ತೀಚಿಗಷ್ಟೇ ರಶ್ಮಿಕಾ ಮಂದಣ್ಣ ಅನಿಮಲ್ ಪ್ರಮೋಷನ್ ವೇಳೆ ಬಾಲಯ್ಯನ ಶೋನಲ್ಲಿ ವಿಜಯ್​ಗೆ ಕಾಲ್​ ಮಾಡಿದ್ದ ವೇಳೆ ಇಬ್ಬರ ನಡುವೆ ಲವ್ ಪಕ್ಕಾ ಎನ್ನುವ ಮಾತು ಕೇಳಿ ಬಂದಿತ್ತು.

ಕನ್ನಡ ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ರಶ್ಮಿಕಾ ಮಂದಣ್ಣ ಟಾಲಿವುಡ್, ಕಾಲಿವುಡ್​, ಬಾಲಿವುಡ್ ಇಂಡಸ್ಟ್ರಿಯಲ್ಲಿ ಬಹುಬೇಡಿಕೆಯ ನಟಿಯಾಗಿದ್ದಾರೆ. ವಿಜಯ್ ಕೂಡ ಟಾಲಿವುಡ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ.

Related Articles

Back to top button
error: Content is protected !!