ಶಿಕ್ಷಣ
ರಸ ಪ್ರಶ್ನೆ ಸ್ಪರ್ಧೆ- ರಾಜ್ಯಮಟ್ಟಕ್ಕೆ ಆಯ್ಕೆಯಾದ ಕಂಡ್ಲೂರು ಪ್ರೌಢಶಾಲಾ ವಿದ್ಯಾರ್ಥಿಗಳು

Views: 36
ಕುಂದಾಪುರ: ಭಗವದ್ಗೀತಾ ಅಭಿಯಾನ ಅಂಗವಾಗಿ ಕುಂದಾಪುರದಲ್ಲಿ ಜರುಗಿದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಮ್‌ಸನ್ ಸರಕಾರಿ ಪ್ರೌಢಶಾಲೆ, ಕಂಡ್ಲೂರು ಇಲ್ಲಿನ 9ನೇ ತರಗತಿಯ ಸ್ವಸ್ತಿಕ್ ಮತ್ತು ಸಾತ್ವಿಕ್ ಸಹೋದರರು ಜಿಲ್ಲಾಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ದಿನಾಂಕ 23.12.2023 ರಂದು ಬೆಳಗಾವಿಯಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ವಿಜೇತ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯೋಪಾಧ್ಯಾಯರು, ಅಧ್ಯಾಪಕ ವೃಂದ, ಶಾಲಾಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರು, ಅಧ್ಯಕ್ಷರು, ಹಾಗೂ ವಿದ್ಯಾರ್ಥಿ ವೃಂದದವರು ಅಭಿನಂದಿಸಿರುತ್ತಾರೆ.