ರಾಜಕೀಯ

ಡಿಕೆ ಬ್ರದರ್ಸ್‌ ಪ್ರಾಬಲ್ಯ ಕುಗ್ಗಿಸಲು ಮಂಡ್ಯದಿಂದ ಕಣಕ್ಕಿಳಿಯತ್ತಾರಾ.. ದೊಡ್ಡಗೌಡ್ರು!?

Views: 16

ಡಿ ಕೆ ಬ್ರದರ್ಸ್‌ ವರ್ಷಸ್ಸು ಹೆಚ್ಚಾಗಿದೆ. ಅಲ್ಲದೇ ಕಾಂಗ್ರೆಸ್‌ ಹೈಕಮಾಂಡ್‌ ಜೊತೆಗೆ ಉತ್ತಮ ಸಂಬಂಧ ಹೊಂದಿರುವ ಕನಕಪುರ ಬಂಡೆ ಡಿ ಕೆ ಶಿವಕುಮಾರ್‌ ಅವರ ಪ್ರಾಬಲ್ಯ ಕುಗ್ಗಿಸಲು ದೊಡ್ಡಗೌಡರನ್ನು ಮಂಡ್ಯದಿಂದ ಕಣಕ್ಕಿಳಿಸಲು ಜೆಡಿಎಸ್‌ ನಾಯಕರು ತಂತ್ರಗಾರಿಕೆಯನ್ನು ನಡೆಸಿದ್ದಾರೆ ಎನ್ನಲಾಗಿದೆ.

ಹೌದು, ಡಿ ಕೆ ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಹಳೇ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆ ಮಾಡಿ ಕಾಂಗ್ರೆಸ್‌ ಪಕ್ಷವನ್ನ ಅಧಿಕಾರಕ್ಕೆ ತಂದಿರುವ ಡಿ ಕೆ ಶಿವಕುಮಾರ್‌ ಪ್ರಾಬಲ್ಯವನ್ನು ಹಳೇ ಮೈಸೂರು ಭಾಗದಲ್ಲೇ ಕುಗ್ಗಿಸಲು ಲೋಕಸಮರದ ವೇದಿಕೆಯನ್ನ ದಳಪತಿಗಳು ಸಜ್ಜುಗೊಳಿಸಿದ್ದಾರೆ.

ಈಗಾಗಲೇ ಹಳೇ ಮೈಸೂರು ಭಾಗದಲ್ಲಿ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರಂತೆ ಡಿ ಕೆ ಶಿವಕುಮಾರ್‌ ಅವರ ಪ್ರಾಬಲ್ಯ ಹೆಚ್ಚಾಗಿದೆ. ಹೀಗಾಗಿ ಮುಂದಿನ ಲೋಕಸಭಾ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಡಿ ಕೆ ಶಿವಕುಮಾರ್‌,  ಜೆಡಿಎಸ್‌ ನಾಯಕರು ಪ್ಲಾನ್‌ ನಡೆಸಿದ್ದಾರೆ.

ಹಳೇ ಮೈಸೂರು ಭಾಗ ಒಕ್ಕಲಿಗ ಸಮುದಾಯದ ಭದ್ರಕೋಟೆಯಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚು ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ನಿಟ್ಟಿನಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರವನ್ನು ವಶಪಡಿಸಿಕೊಳ್ಳುವ ಮೂಲಕ ಡಿ ಕೆ ಶಿವಕುಮಾರ್‌ ಗೆ ಠಕ್ಕರ್‌ ಕೊಡಲು ತಯಾರಿ ನಡೆಸಿವೆ.

ಈಗಾಗಲೇ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ ಕೆ ಬ್ರದರ್ಸ್‌ ತಮ್ಮದೇ ಆದ ವರ್ಚಸ್ಸನ್ನ ಹೊಂದಿದೆ. ಮಂಡ್ಯ ಕ್ಷೇತ್ರವನ್ನು ವಶಪಡಿಸಿಕೊಳ್ಳುವ ನಿಟ್ಟಿನಲ್ಲಿ ಹೊಸ ತಂತ್ರಗಾರಿಕೆಯನ್ನು ನಡೆಸಿದ್ದಾರೆ.

ಈಗಾಗಲೇ 2019 ರ ಲೋಕಸಭಾ ಚುನಾವಣೆ ಹಾಗೂ 2023 ರ ವಿಧಾನಸಭಾ ಚುಣಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಈ ಬಾರೀ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಮಾತುಗಳು ಕೇಳಿ ಬಂದಿತ್ತು. ಆದರೆ, ಈ ಬಾರೀ ಮಂಡ್ಯ ಕ್ಷೇತ್ರವನ್ನು ವಶಪಡಿಸಿಕೊಳ್ಳುವುದು ದಳಪತಿಗಳಿಗೆ ಪ್ರತಿಷ್ಠೆಯಾಗಿದೆ.

ಹೀಗಾಗಿ ನಿಖಿಲ್‌ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುವುದಕ್ಕಿಂತ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠರಾದ ಹೆಚ್‌ ಡಿ ದೇವೇಗೌಡ ಅವರನ್ನು ಕಣಕ್ಕಿಳಿಸುವ ಕುರಿತು ಜೆಡಿಎಸ್‌ ಪಾಳಯದಲ್ಲಿ ಚರ್ಚೆ ನಡೆದಿದೆ ಎನ್ನಲಾಗಿದೆ.

ನಿಖಿಲ್‌ ಕುಮಾರಸ್ವಾಮಿ ಅವರು ಎಲ್ಲಾ 28 ಲೋಕಸಭಾ ಕ್ಷೇತ್ರಗಳಲ್ಲಿಯೂ ಪ್ರಚಾರ ಮಾಡುತ್ತಾರೆ. ಯಾವುದೇ ಕಾರಣಕ್ಕೂ ಅವರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ, ಜನರು ಚುನಾವಣೆಗೆ ನಿಲ್ಲಿ ಎಂದು ಹೇಳುತ್ತಿದ್ದಾರೆ. ಮಂಡ್ಯ ಕ್ಷೇತ್ರದಿಂದಲೇ ಕಣಕ್ಕೆ ಇಳಿಯಲಿ ಎಂದು ಬಯಸುತ್ತಿದ್ದಾರೆ. ಎರಡು ಬಾರಿ ಅವರು ಸೋತಿದ್ದಾರೆ. ಹೀಗಾಗಿ ಜನರ ಅನುಕಂಪವೂ ಇದೆ. ಆದರೆ, ಅವರಿಗೆ ಸ್ಪರ್ಧೆ ಮಾಡುವ ಉದ್ದೇಶವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಒಕ್ಕಲಿಗರ ಭದ್ರ ಕೋಟೆಯನ್ನು ವಶಪಡಿಸಕೊಳ್ಳಬೇಕು. ಈ ಹಿಂದೆ ಮಂಡ್ಯದಲ್ಲಿ ಎಲ್ಲಾ ವಿಧಾನಸಭಾ ಸ್ಥಾನಗಳನ್ನು ಜೆಡಿಎಸ್‌ ಗೆಲುವು ಸಾಧಿಸಿತ್ತು. ಆದರೆ, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಡಿ ಕೆ ಶಿವಕುಮಾರ್‌ ವರ್ಚಸ್ಸು  ಹೆಚ್ಚಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರವನ್ನು ಗೆಲ್ಲುವ ಮೂಲಕ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕಾದರೇ ಮೊದಲು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಗೆಲ್ಲಬೇಕಾದ ಅನಿವಾರ್ಯತೆ ದಳಪತಿಗಳಿಗಿದೆ.

ಹೀಗಾಗಿ ಹಳೇ ಮೈಸೂರು ಭಾಗದಲ್ಲಿ ಹೆಚ್ಚಾಗಿರುವ ಡಿ ಕೆ ಶಿವಕುಮಾರ್‌ ಅವರ ಪ್ರಾಬಲ್ಯವನ್ನು ಕುಗ್ಗಿಸುವ ನಿಟ್ಟಿನಲ್ಲಿ ದೊಡ್ಡಗೌಡರನ್ನು ಮಂಡ್ಯದಿಂದ ಕಣಕ್ಕಿಳಿಸಲು ಜೆಡಿಎಸ್‌ ನಾಯಕರು ತಂತ್ರಗಾರಿಕೆಯನ್ನು ನಡೆಸಿದ್ದಾರೆ ಎನ್ನಲಾಗಿದೆ.

 

.

Related Articles

Back to top button
error: Content is protected !!