ಜನಮನ
ಬಾತ್ರೂಮ್ನಲ್ಲಿ ಗ್ಯಾಸ್ ಗೀಸರ್ ಲೀಕ್ ಆಗಿ ಮಹಿಳೆ ಸಾವು, ಮಗು ಗಂಭೀರ

Views: 76
ಬೆಂಗಳೂರು: ಸ್ನಾನಕ್ಕೆ ಹೋದಾಗ ಬಾತ್ರೂಮ್ನಲ್ಲಿ ಗ್ಯಾಸ್ ಗೀಸರ್ ಲೀಕ್ ಆಗಿ ಮಹಿಳೆಯೊಬ್ಬರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರಿನ ಅಶ್ವತ್ ನಗರದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ರಾಜೇಶ್ವರಿ (23) ಎಂದು ಗುರುತಿಸಲಾಗಿದೆ. ರಮ್ಯ ಅವರು ತಮ್ಮ ನಾಲ್ಕು ವರ್ಷದ ಮಗುವಿನೊಟ್ಟಿಗೆ ಸ್ನಾನ ಮಾಡಲು ಹೋಗಿದ್ದಾಗ ಗ್ಯಾಸ್ ಗೀಸರ್ನಿಂದ ವಿಷ ಅನಿಲ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿದೆ. ಗೀಸರ್ ಸೋರಿಕೆಯಾದ ಕಾರಣ ಸ್ನಾನ ಮಾಡುತ್ತಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ.
ಬಹಳ ಹೊತ್ತಾದರೂ ಸಾನ್ನದ ಕೊಠಡಿಯಿಂದ ಹೊರ ಬಾರದಿದ್ದಕ್ಕೆ ಅನುಮಾನಗೊಂಡ ಪತಿ ಹೋಗಿ ನೋಡಿದಾಗ ಕುಸಿದು ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಸ್ಥಳೀಯರ ನೆರವಿನಿಂದ ತಾಯಿ – ಮಗುವನ್ನು ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಗರ್ಭಿಣಿ ಮಹಿಳೆ ಮೃತಪಟ್ಟಿದ್ದರು. ಮಗುವಿನ ಸ್ಥಿತಿ ಗಂಭೀರವಾಗಿತ್ತು.
ಈ ಸಂಬಂಧ ಸದಾಶಿವ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






