ಜನಮನ

ಹಾಳು ಬಿದ್ದ ಮನೆಯಲ್ಲಿ ಮೂರು ನಿಗೂಢ ಅಸ್ತಿಪಂಜರ ಪತ್ತೆ, ಮೃತಪಟ್ಟವರು ಯಾರು?..

Views: 13

ಚಿತ್ರದುರ್ಗದ ಚಳ್ಳಕೆರೆ ಗೇಟ್ ಬಳಿ ಪಾಳುಬಿದ್ದ ಮನೆಯೊಂದರಲ್ಲಿ ಮೂರು ಅಸ್ತಿಪಂಜರ ಪತ್ತೆಯಾಗಿದ್ದು, ಸ್ಥಳೀಯರನ್ನು ಗಾಬರಿಗೆ ತಳ್ಳಿದೆ.ಯಾರು ಮೃತಪಟ್ಟಿರಬಹುದು ಎಂಬ ಚರ್ಚೆಗಳು ಶುರುವಾಗಿವೆ.

ಹಳೆಯ ಬೆಂಗಳೂರು ರಸ್ತೆಯಲ್ಲಿರುವ ಪಾಳುಬಿದ್ದ ಮನೆಯಲ್ಲಿ ಕೆಲವು ವರ್ಷಗಳ ಹಿಂದೆ ಜಗನ್ನಾಥ ರೆಡ್ಡಿ, ಪತ್ನಿ ಪ್ರೇಮಾ, ಮಗಳು ವಾಸಿಸುತ್ತಿದ್ದರು. ಅವರೇ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಜಗನ್ನಾಥ ರೆಡ್ಡಿ ಚಿತ್ರದುರ್ಗದಲ್ಲಿ ಪಿಡಬ್ಲುಡಿ ರಿಟೈರ್ ಎಕ್ಸಿಕ್ಯೂಟಿವ್ ಇಂಜಿನಿಯರ್ ​ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಹೀಗಾಗಿ ಜಗನ್ನಾಥ ರೆಡ್ಡಿ, ಪತ್ನಿ ಪ್ರೇಮಾ, ಮಗಳು ಮೃತಪಟ್ಟಿರುವ ಶಂಕೆ ಇದೆ. ಜಗನ್ನಾಥ ರೆಡ್ಡಿಗೆ 3 ಜನ ಗಂಡು ಮಕ್ಕಳು, ಒಬ್ಬರು ಹೆಣ್ಣು ಮಗಳಿದ್ದಳು. ಕುಟುಂಬಸ್ಥರಿಗೆ ಆರೋಗ್ಯ ಸಮಸ್ಯೆ ಇತ್ತು ಎಂಬ ಮಾಹಿತಿ ಇದೆ. ಕಳೆದ 10 ವರ್ಷಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಎಸ್ಪಿ ಎಸ್.ಜೆ. ಕುಮಾರಸ್ವಾಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button
error: Content is protected !!