ಕರಾವಳಿ
ಪ್ರಥಮ ಪಿಯುಸಿ ವಿದ್ಯಾರ್ಥಿನಿ ಫ್ಯಾನಿಗೆ ನೇಣು ಬಿಗಿದು ಕೊಂಡು ಆತ್ಮಹತ್ಯೆ

Views: 153
ಪುತ್ತೂರು: ಪ್ರಥಮ ಪಿಯುಸಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳು ಜೀವನದಲ್ಲಿ ಜಿಗುಪ್ಸೆಗೊಂಡು ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನ ಪಡುವನ್ನೂರು ಗ್ರಾಮದ ಕನ್ನಡ್ಕದಲ್ಲಿ ರವಿವಾರ ನಡೆದಿದೆ.
ಕಜೆಮೂಲು ನಿವಾಸಿ ಚಂದ್ರಶೇಖರ್ ಗೌಡ ದಂಪತಿಯ ಪುತ್ರಿ ದೀಕ್ಷಾ (16) ಮೃತ ವಿದ್ಯಾರ್ಥಿನಿ. ದೀಕ್ಷಾ ಪುತ್ತೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ತಂದೆ ತಾಯಿ ಕೃಷಿ ಕೆಲಸದಲ್ಲಿ ಇದ್ದ ಸಂದರ್ಭದಲ್ಲಿ ಮನೆಯಲ್ಲಿ ಒಂಟಿಯಾಗಿದ್ದ ಈಕೆ ರೂಮ್ ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.
ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾದ ಕಾರಣ ತಿಳಿದುಬಂದಿಲ್ಲ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.