ಶಿಕ್ಷಣ

ಏ.20,21ಕ್ಕೆ ನಡೆಯಬೇಕಾಗಿದ್ದ ಸಿಇಟಿ ಪರೀಕ್ಷೆ ಬದಲಾಗಿ, ಏ.18,19ಕ್ಕೆ.. ಇಲ್ಲಿದೆ ಮಾಹಿತಿ..

Views: 13

ಬೆಂಗಳೂರು: ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಎರಡು ದಿನಗಳ ಮಟ್ಟಿಗೆ ಹಿಂದೂಡಿದ್ದು, ಏಪ್ರಿಲ್ 18 ಮತ್ತು 19ರಂದು ಪರೀಕ್ಷೆಗಳು ನಡೆಯಲಿವೆ. ಈ ಮೊದಲು ಏಪ್ರಿಲ್ 20 ಮತ್ತು 21ರಂದು ಪರೀಕ್ಷೆ ನಿಗದಿಯಾಗಿತ್ತು.

‘ಏಪ್ರಿಲ್ 21ರಂದು ಎನ್‌ಡಿಎ ಪರೀಕ್ಷೆ ನಡೆಯುತ್ತಿರುವುದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಕನ್ನಡ ಪರೀಕ್ಷೆ ಏಪ್ರಿಲ್ 20ರಂದು ನಡೆಯಲಿದೆ’ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

ವೃತ್ತಿಪರ ಕೋರ್ಸುಗಳಿಗೆ ಸೇರಲು ಬಯಸುವ ಅಭ್ಯರ್ಥಿಗಳು ಸಿಇಟಿ ಪರೀಕ್ಷೆಗೆ ಬುಧವಾರದಿಂದ (ಜ.10) ಫೆ. 10ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಬಿಪಿಟಿ, ಬಿಪಿಒ, ಬಿಎಸ್ಸಿ ಅಲೈಡ್ ಹೆಲ್ತ್ ಸೈನ್ಸ್ ಕೋರ್ಸುಗಳಿಗೆ ಸೇರಲು ಬಯಸುವ ಅಭ್ಯರ್ಥಿಗಳೂ ಈಗಲೇ ಅರ್ಜಿ ಸಲ್ಲಿಸಿ ನೋಂದಾಯಿಸಿಕೊಳ್ಳಬೇಕೆಂದು ಸೂಚಿಸಲಾಗಿದೆ.

Related Articles

Back to top button
error: Content is protected !!