ಇತರೆ
ಕಾರು-ಟ್ಯಾಂಕರ್ ನಡುವೆ ಭೀಕರ ಅಪಘಾತ; ಮೂವರು ಸಾವು, ಇಬ್ಬರು ಗಂಭೀರ

Views: 63
ಚಿತ್ರದುರ್ಗ: ಕಾರು- ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಸಾವನ್ನಪ್ಪಿದ ಘಟನೆ ಚಿತ್ರದುರ್ಗದ ಮದಕರಿಪುರ ಬ್ರೀಡ್ಜ್ ಬಳಿ ಸಂಭವಿಸಿದೆ.
ಬೆಂಗಳೂರು ಮೂಲದ ನಿರ್ಮಲ (55), ವಿನುತ (40), ಯಶಸ್(2) ಮೃತರು ಎಂದು ಗುರುತಿಸಲಾಗಿದೆ.
ಚಿತ್ರದುರ್ಗದ ಮದಕರಿಪುರ ಹೊಸ ಹೈವೆ ಬ್ರೀಡ್ಜ್ ಬಳಿ ಅಪಘಾತ ನಡೆದಿದೆ. ಅಪಘಾತದದಲ್ಲಿ ಫಣಿರಾಜು, ರಶ್ಮಿ ಎಂಬವರು ಗಂಭೀರವಾಗಿ ಗಾಯಗೊಂಡಿದ್ದು ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು ಕಡೆಯಿಂದ ಹೊಸಪೇಟೆ ಕಡೆ ಹೋಗುವ ವೇಳೆ ಅಪಘಾತ ನಡೆದಿದ್ದು, ಗಂಭೀರ ಗಾಯಾಳುಗಳನ್ನು ಬಸವೇಶ್ವರ ಆಸ್ಪತ್ರೆಗೆ ಸೇರಿಸಲಾಗಿದೆ. ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ಸಿಪಿಐ ಮುದ್ದುರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗದ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.






