ಇತರೆ
ತೀರ್ಥಹಳ್ಳಿ: ಡಿಗ್ರಿ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

Views: 91
ಶಿವಮೊಗ್ಗ,: ಪದವಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಬಿಳುಕೊಪ್ಪದಲ್ಲಿ ಇಂದು ಬೆಳಗ್ಗೆ ನಡೆದಿದೆ.
ಬಿಳುಕೊಪ್ಪ ಗ್ರಾಮದ ಅಧೀಕ್ಷಾ (20) ಮೃತ ವಿದ್ಯಾರ್ಥಿನಿ. ಇವರು ತೀರ್ಥಹಳ್ಳಿ ಪಟ್ಟಣದ ಬಾಳೆಬೈಲು ಪದವಿ ಕಾಲೇಜಿನ ವಿದ್ಯಾರ್ಥಿನಿಯಾಗಿದ್ದರು.
ಅಧೀಕ್ಷಾ ಗುರುವಾರ ರಾತ್ರಿ ತಂದೆ ತಾಯಿ ಮನೆಯಲ್ಲಿ ಇಲ್ಲದ ವೇಳೆ ಕೋಣೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶುಕ್ರವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






