ಕರಾವಳಿ
ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು: ತಾಲೂಕು ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ

Views: 46
ಮುಸ್ಲಿಂ ಮಹಿಳೆಯರ ಪರ ಅವಹೇಳನಕಾರಿಯಾಗಿ ಮಾತನಾಡಿದ ಪ್ರಕರಣದ ಆರೋಪಿ, ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿರುವ ವಕೀಲ ಡಿ. ಚಂದ್ರೇಗೌಡ ಅವರನ್ನು ಶ್ರೀರಂಗಪಟ್ಟಣ ತಾಲೂಕು ಕಾಂಗ್ರೆಸ್ ಕಾನೂನು ಘಟಕದ ಅಧ್ಯಕ್ಷ ಸ್ಥಾನದಿಂದ ಉಚ್ಚಾಟನೆ ಮಾಡಲಾಗಿದೆ.
ಈ ಬಗ್ಗೆ ಮಂಡ್ಯ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಿ.ಡಿ ಗಂಗಾಧರ್ ಖಚಿತಪಡಿಸಿದ್ದಾರೆ.
ಕಲ್ಲಡ್ಕ ಪ್ರಭಾಕರ್ ಭಟ್ ಪರ ವಕಾಲತ್ತು ವಹಿಸಿದ ಕಾರಣಕ್ಕೆ ಉಚ್ಚಾಟನೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ಮುಸ್ಲಿಂ ಮಹಿಳೆಯರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿರುವ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಚಂದ್ರೇಗೌಡ ಜಾಮೀನು ಕೊಡಿಸಿದ್ದಾರೆ. ಇದು ಪಕ್ಷದ ಕಾನೂನು ಘಟಕದ ನಿಯಮಗಳಿಗೆ ವಿರುದ್ದವಾಗಿದೆ. ಈ ಕಾರಣಕ್ಕೆ ಅವರ ವಿರುದ್ದ ಕ್ರಮ ಕೈಗೊಳ್ಳಲಾಗಿದೆ ಎಂದು ಕೆಪಿಸಿಸಿ ಕಾನೂನು ಘಟಕದ ಮಂಡ್ಯ ಜಿಲ್ಲಾಧ್ಯಕ್ಷ ಎ.ಎಸ್ ಗೌರಿ ಶಂಕರ್ ತಿಳಿಸಿದ್ದಾರೆ.






