ಶಿಕ್ಷಣ

BREKING NEWS :5, 8, 9, 11ನೇ ತರಗತಿ ಬೋರ್ಡ್‌ ಪರೀಕ್ಷೆಗಳು ರದ್ದು,ಈ ಶೈಕ್ಷಣಿಕ ವರ್ಷದಿಂದಲೇ ಜಾರಿ

Views: 494

ಬೆಂಗಳೂರು, 5, 8, 9 ಹಾಗೂ 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಕುರಿತು ಹೊರಡಿಸಿದ್ದ ಸುತ್ತೋಲೆಯನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಈ ಶೈಕ್ಷಣಿಕ ವರ್ಷದಿಂದಲೇ ಇದು ಜಾರಿಗೆ ಬರಲಿದೆ.

ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆಯನ್ನು ನಡೆಸುವ ಕುರಿತು 2023ರ ಡಿಸೆಂಬರ್‌ನಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ)ಯು ಹೊರಡಿಸಿದ್ದ ಸುತ್ತೋಲೆ ರದ್ದಾಗಿದೆ.

ಖಾಸಗಿ ಶಾಲೆಗಳ ಸಂಘಟನೆ ರುಪ್ಸಾ ಸಲ್ಲಿಕೆ ಮಾಡಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಕೋರ್ಟ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಸುತ್ತೋಲೆಯನ್ನು ರದ್ದುಗೊಳಿಸಿ ಆದೇಶಿಸಿದೆ.

ನ್ಯಾಯಮೂರ್ತಿ ರವಿ ಹೊಸಮನಿ ಅವರು ಬುಧವಾರ ನೀಡಿರುವ ಆದೇಶದಿಂದಾಗಿ ಮಾರ್ಚ್ 11 ರಿಂದ 18ರ ತನಕ ನಿಗದಿಯಾಗಿದ್ದ 2024-25ನೇ ಸಾಲಿನ ಬೋರ್ಡ್‌ ಪರೀಕ್ಷೆಗಳು ರದ್ದಾಗಲಿವೆ.

ರಾಜ್ಯ ಸರ್ಕಾರಿ ಶಾಲೆಗಳ ಪಠ್ಯಕ್ರಮ ಬೇರೆ, ಖಾಸಗಿ ಶಾಲೆಗಳ ಪಠ್ಯಕ್ರಮ ಬೇರೆಯಾಗಿದೆ. ಆದ್ದರಿಂದ ಬೋರ್ಡ್‌ ಪರೀಕ್ಷೆಯನ್ನು ರದ್ದುಗೊಳಿಸಬೇಕು ಎಂದು ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ ಅರ್ಜಿಯನ್ನು ಸಲ್ಲಿಸಿತ್ತು.

Related Articles

Back to top button
error: Content is protected !!