ಜನಮನ

ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್ ಸಾವು ಗೆದ್ದು ಬಂದ ಕಂದಮ್ಮ..!

Views: 215

ವಿಜಯಪುರ,  ಫಲಿಸಿದ ರಾಜ್ಯದ ಜನರ ಪ್ರಾರ್ಥನೆ ಪವಾಡ ಸದೃಶ್ಯ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ ಸಾತ್ವಿಕ್. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣ, ಸತತ 20ಗಂಟೆಗಳ ಕಾಲ ನಡೆದ ಕಾರ್ಯಾಚರಣೆಯಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮಗುವನ್ನು ಸುರಕ್ಷಿತವಾಗಿ ಪಾರು ಮಾಡುವಲ್ಲಿ ಯಶಸ್ವಿಯಾದ ಪರಿಹಾರ ತಂಡ, ಸ್ಥಳದಲ್ಲಿ ಜಮಾಯಿಸಿದ್ದ ಸಾವಿರಾರು ಜನರು ನೆಮ್ಮದಿಯ ನಿಟ್ಟುಸಿರು ಬಿಟ್ಟ ಜನರು.

ಇಂತಹ ಮನಕಲಕುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದಲ್ಲಿ ಕಂಡು ಬಂತು.ನಿನ್ನೆ ಸಂಜೆ ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ತೋಟದ ಕೊಳವೆ ಬಾವಿ(ಬೋರ್ ವೆಲ್)ಗೆ ಬಿದ್ದ 2 ವರ್ಷದ ಸಾತ್ವಿಕ್‌ನನ್ನು ಪರಿಹಾರ ತಂಡ ಸುರಕ್ಷಿತವಾಗಿ ಪಾರು ಮಾಡಿದೆ. ಕಾರ್ಯಾಚರಣೆ ವೇಳೆ ಸಾಕಷ್ಟು ಅಡ್ಡಿ ಆತಂಕಗಳು ಎದುರಾರದೂ ಪರಿಹಾರ ತಂಡ ನಿರಂತರ ಕಾರ್ಯಾಚರಣೆ ನಡೆಸಿತು. ಕಾರ್ಯಾಚರಣೆ ವೇಳೆ ಅಡ್ಡ ಬಂದು ಬಂಡೆಗಳನ್ನು ಕೊರೆದು, ಪೈಪ್‌ನ್ನು ತುಂಡರಿಸಿ ನೆರವಿಗಾಗಿ ಹಾತೊರೆಯುತ್ತ ಅಳುತ್ತಿದ್ದ ಕಂದಮ್ಮನನ್ನು ಹೊರ ತೆಗೆದರು.

ಸ್ಥಳದಲ್ಲಿ ಮಗುವಿಗೆ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಆಂಬುಲೆನ್ಸ್ ವಾಹನದಲ್ಲಿ ಆಸ್ಪತ್ರೆಗೆ ರವಾನಿಸಲಾಯಿತು. ಮಗು ಜೀವಂತವಾಗಿ ಬರುವಂತೆ ರಾಜ್ಯಾದಂತ ಜನರು ದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದ್ದರು. ಅದೃಷ್ಟ ಚೆನ್ನಾಗಿದ್ದರೆ ಯಾವುದೆ ಪವಾಡಬೇಕಾದರೂ ನಡೆಯಬಹುದು ಎಂಬುದಕ್ಕೆ ಕೊಳವೆಬಾವಿಗೆ ಬಿದ್ದಿದ್ದ ಮಗುವಿನ ಸುರಕ್ಷಿತ ರಕ್ಷಣೆಯೇ ಸಾಕ್ಷಿಯಾಗಿದೆ.

ಸುಮಾರು 29 ಗಂಟೆಗಳ ಕಾಲ ರಾಷ್ಟ್ರೀಯ ವಿಪತ್ತು ದಳ(ಎನ್‌ಡಿಆರ್‌ಎಫ್) ಹಾಗೂ ಎಸ್‌ಡಿಆರ್‌ಎಫ್ ತಂಡಗಳು ನಡೆಸಿದ ರಕ್ಷಣಾ ಕಾರ್ಯಾಚರಣೆಯು ಫಲಿಸಿ ಕೊಳವೆಬಾವಿಗೆ ಬಿದ್ದಿದ್ದ 2 ವರ್ಷದ ಸಾತ್ವಿಕ್ ಸಾವು ಗೆದ್ದು ಬಂದಿದ್ದಾನೆ.

ಸುಮಾರು 20 ಅಡಿಯ ಕೊಳವೆಬಾವಿಯಿಂದ ಬಾಲಕನನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ. ಕೊನೆಯ ಹಂತದ ಕಾರ್ಯಾಚರಣೆ ವೇಳೆ ಬಾಲಕ ಅಳುತ್ತಿರುವ ಧ್ವನಿಯು ಸಿಬ್ಬಂದಿಗೆ ಕೇಳಿಸಿದೆ. ಬಾಲಕ ಅಮ್ಮ ಎಂದು ಅಳುತ್ತಿರುವ ಶಬ್ದ ಕೇಳುತ್ತಿದ್ದು, ಇನ್ನೇನು ಮೇಲಕ್ಕೆತ್ತುವ ಪ್ರಕ್ರಿಯೆಯೊಂದೇ ಬಾಕಿ ಉಳಿದಿತ್ತು..

ಮಗು ಬಿದ್ದ ಅರ್ಧ ಗಂಟೆಯಲ್ಲಿಯೇ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ ಕಾರಣ ಮಗುವನ್ನು ರಕ್ಷಿಸಲು ಸಾಧ್ಯವಾಯಿತು. ನಿನ್ನೆ ರಾತ್ರಿಯೇ ಹಿಟಾಚಿ ಮೂಲಕ ಕೊಳವೆಬಾವಿ ಪಕ್ಕದಲ್ಲಿ ಅಡ್ಡಲಾಗಿ 3 ಅಡಿ ರಂಧ್ರ ಕೊರೆಯಲಾಯಿತು. ಆ ರಂಧ್ರದ ಮೂಲಕವೇ ಬಾಲಕ ಬಿದ್ದಿರುವ ಜಾಗಕ್ಕೆ ಹಗ್ಗದ ಮೂಲಕ ಒಂದು ಕ್ಯಾಮೆರಾ ಇಳಿಸಲಾಯಿತು. ಬಾಲಕನ ಚಲನವಲನದ ಮೇಲೆ ಕ್ಯಾಮೆರಾ ಮೂಲಕ ನಿಗಾ ಇರಿಸಿ, ನಿರಂತರವಾಗಿ ಆಕ್ಸಿಜನ್ ಪೂರೈಕೆ ಮಾಡಲಾಗಿತ್ತು.

ಬಾಲಕನ ಕಾಲು ಅಲುಗಾಡುತ್ತಿರುವುದನ್ನು ಕ್ಯಾಮೆರಾ ಮೂಲಕ ಸೆರೆಹಿಡಿದ ಸಿಬ್ಬಂದಿಯು, ಕಾರ್ಯಾಚರಣೆಯನ್ನು ಇನ್ನಷ್ಟು ಕ್ಷಿಪ್ರಗೊಳಿಸಿ, ಕೊನೆಗೆ ಮಗುವನ್ನು ರಕ್ಷಣೆ ಮಾಡಿದ್ದಾರೆ.

ಸತೀಶ್ ಮತ್ತು ಪೂಜಾ ದಂಪತಿಯ ಪುತ್ರ ಸಾತ್ವಿಕ್ ಮುಜಗೊಂಡ (2)ಸಂಜೆ 5.30ರ ಸುಮಾರಿಗೆ ಆಟವಾಡಲು ಹೋಗಿ ಆಯತಪ್ಪಿ ಕೊಳವೆ ಬಾವಿಗೆ ಬಿದ್ದಿದ್ದು,ಇದಾದ ಕೆಲವೇ ಹೊತ್ತಿನಲ್ಲಿ ಅಂದರೆ, ಸಂಜೆ 6 ಗಂಟೆಯಿಂದಲೇ ರಕ್ಷಣಾ ಕಾರ್ಯಾಚರಣೆ ಆರಂಭವಾಗಿತ್ತು. ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ತಂಡಗಳು ಸತತವಾಗಿ ಕಾರ್ಯಾಚರಣೆ ನಡೆಸಿ ಕೊನೆಗೂ ಮಗುವನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ.

Related Articles

Back to top button
error: Content is protected !!