ಕರಾವಳಿ

ಉಡುಪಿ, ದಕ್ಷಿಣ ಕನ್ನಡ ಕರಾವಳಿ ಸೇರಿದಂತೆ ಒಳನಾಡಿನಲ್ಲಿ ಬಿಸಿ ಗಾಳಿ ಎಚ್ಚರಿಕೆ..!

Views: 52

ಕರಾವಳಿ ಹಾಗೂ ದಕ್ಷಿಣ, ಉತ್ತರ ಒಳನಾಡಿನಲ್ಲಿ ತಾಪಮಾನ ಎಚ್ಚರಿಕೆ ಜತೆಗೆ ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ಇದರೊಟ್ಟಿಗೆ ಮೂರು ಜಿಲ್ಲೆಗಳಿಗೆ ಮಳೆ ಸೂಚನೆಯನ್ನು ನೀಡಲಾಗಿದೆ.

ಮುಖ್ಯವಾಗಿ ಚಾಮರಾಜನಗರ, ಕೊಡಗು ಮತ್ತು ರಾಮನಗರ ಜಿಲ್ಲೆಗಳಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಒಣ ಹವೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

ಏಪ್ರಿಲ್‌ 6ರವರೆಗೆ ಬಳ್ಳಾರಿ, ಬಾಗಲಕೋಟೆ, ಕಲಬುರಗಿ, ಕೊಪ್ಪಳ ಮತ್ತು ಗದಗ ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸುವ ಸಾಧ್ಯತೆ ಇದೆ. ರಾಯಚೂರು, ಬಾಗಲಕೋಟೆ, ಕೊಪ್ಪಳ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ರಾತ್ರಿ ಸಮಯ ಬೆಚ್ಚಗಿನ ವಾತಾವರಣ ಇರಲಿದೆ. ಮುಂದಿನ 3 ದಿನಗಳಲ್ಲಿ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ

ಪ್ರತ್ಯೇಕ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಕ್ರಮೇಣ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಹಾಸನ, ಮಂಡ್ಯ ಮತ್ತು ಮೈಸೂರಿನಲ್ಲಿ ತಾಪಮಾನ ಏರಿಕೆ ಆಗಲಿದೆ.

ಮುಂದಿನ 5 ದಿನಗಳು ಬೆಳಗಾವಿ, ಧಾರವಾಡ, ವಿಜಯಪುರ, ರಾಯಚೂರು ಮತ್ತು ಹಾವೇರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಕ್ರಮೇಣ 2 ರಿಂದ 4 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ.

ಯೆಲ್ಲೋ ಅಲರ್ಟ್

ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳಿಗೆ ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ.

Related Articles

Back to top button
error: Content is protected !!