ರಾಜಕೀಯ
ನೀತಿ ಸಂಹಿತೆ ಉಲ್ಲಂಘನೆ; ಶ್ರೀನಿವಾಸ ಪೂಜಾರಿಗೆ ಕೋರ್ಟ್ ಸಮನ್ಸ್

Views: 139
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿ, ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.
ಮಾರ್ಚ್ 30 ರಂದು ಕಟಪಾಡಿ ಖಾಸಗಿ ಕಾಲೇಜು ಅವರಣದಲ್ಲಿ ಶ್ರೀನಿವಾಸ ಪೂಜಾರಿ ಪ್ರಚಾರ ಭಾಷಣ ಮಾಡಿದ್ದರು. ಚುನಾವಣಾ ಅಧಿಕಾರಿಗಳ ಅನುಮತಿ ಇಲ್ಲದೆ, ರಾಜಕೀಯ ಭಾಷಣ ಮಾಡಿದ ಹಿನ್ನಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಅಡಿಯಲ್ಲಿ ಕೋರ್ಟ್ಗೆ ಖಾಸಗಿ ದೂರು ದಾಖಲಿಸಲಾಗಿತ್ತು.
ಕೋಟ ಶ್ರೀನಿವಾಸ ಪೂಜಾರಿ, ಗುರ್ಮೆ ಸುರೇಶ್ ಶೆಟ್ಟಿ, ಲಾಲಾಜಿ ಮೆಂಡನ್ ಹಾಗೂ ಶಾಲಾ ಆಡಳಿತ ಮಂಡಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಈ ದೂರಿನ ಹಿನ್ನೆಲೆಯಲ್ಲಿ ಕೋರ್ಟ್ ಸಮನ್ಸ್ ಜಾರಿ ಮಾಡಿ ಮೇ 27ಕ್ಕೆ ವಿಚಾರಣೆಯನ್ನು ಮುಂದೂಡಿದೆ.






