ಆಸ್ಪತ್ರೆಯಲ್ಲಿ ಮಕ್ಕಳ ಕಳ್ಳತನ, 5 ಲಕ್ಷ ರೂ.ಗೆ ಮಗು ಮಾರಾಟ; ಸಿಬಿಐ ದಾಳಿ ನಡೆಸಿ 10 ಮಕ್ಕಳ ರಕ್ಷಣೆ !

Views: 75
ಆಸ್ಪತ್ರೆಗಳಿಂದಲೇ ಮಕ್ಕಳನ್ನು ಮಾರಾಟ ಮಾಡುತ್ತಿರುವ ಪ್ರಕರಣದ ಕುರಿತು ನಿಖರ ಮಾಹಿತಿ ಪಡೆದ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಕೇಶವಪುರಂನಲ್ಲಿರುವ ಮನೆಯೊಂದರಲ್ಲಿ ಎರಡು ನವಜಾತ ಶಿಶುಗಳನ್ನು ಅಧಿಕಾರಿಗಳು ರಕ್ಷಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಏಳೆಂಟು ಜನರನ್ನು ಬಂಧಿಸಿದ್ದಾರೆ. ಆಸ್ಪತ್ರೆಯ ನರ್ಸ್‌ಗಳು, ಸ್ವಚ್ಛತಾ ಸಿಬ್ಬಂದಿ ಸೇರಿ ಏಳೆಂಟು ಜನರನ್ನು ಬಂಧಿಸಲಾಗಿದೆ. ಆಸ್ಪತ್ರೆಗಳಲ್ಲಿ ಜನಿಸುವ ನವಜಾತ ಶಿಶುಗಳನ್ನು ಕಳ್ಳತನ ಮಾಡಿಯೋ, ಪೋಷಕರಿಗೆ ಮಗು ತೀರಿಕೊಂಡಿತು ಎಂಬುದಾಗಿ ಸುಳ್ಳ ಹೇಳಿ ಮಕ್ಕಳನ್ನು ಕಳ್ಳಸಾಗಣೆ ಮಾಡಲಾಗುತ್ತಿತ್ತು.
ಕಳೆದ ಒಂದು ತಿಂಗಳಲ್ಲಿಯೇ ರಾಷ್ಟ್ರ ರಾಜಧಾನಿ ವ್ಯಾಪ್ತಿಯಲ್ಲಿ 10 ಮಕ್ಕಳನ್ನು ಮಾರಾಟ ಮಾಡಲಾಗಿದೆ ಎಂಬುದಾಗಿ ಸಿಬಿಐ ಮೂಲಗಳು ತಿಳಿಸಿವೆ. ಯಾವ ಆಸ್ಪತ್ರೆಯಿಂದ ಯಾವ ಮಕ್ಕಳನ್ನು ಕಳ್ಳತನ ಮಾಡಲಾಯಿತು, ಅವುಗಳನ್ನು ಯಾರಿಗೆ ಮಾಡಲಾಯಿತು ಎಂಬುದರ ಕುರಿತು ಸಿಬಿಐ ಅಧಿಕಾರಿಗಳು ಕೂಲಂಕಷವಾಗಿ ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಇವುಗಳಲ್ಲಿ ಬಹುತೇಕ ಮಕ್ಕಳನ್ನು ರಕ್ಷಣೆ ಮಾಡಲಾಗಿದೆ ಎಂದು ಕೂಡ ಮೂಲಗಳು ತಿಳಿಸಿವೆ.
10 ಮಕ್ಕಳ ಪೋಷಕರು ಯಾರು? ಅವುಗಳನ್ನು ಯಾವ ಉದ್ದೇಶಕ್ಕಾಗಿ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂಬುದು ಸೇರಿ ಆಸ್ಪತ್ರೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂಬುದರ ಬಗ್ಗೆ ಸಿಬಿಐ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.






