ಇತರೆ
ಬೆಂಗಳೂರು- ಗೋಕರ್ಣ ಖಾಸಗಿ ಬಸ್ ಪಲ್ಟಿ, ಮೂವರು ಸಾವು, 8 ಜನ ಗಂಭೀರ

Views: 181
ಚಿತ್ರದುರ್ಗ: ಖಾಸಗಿ ಬಸ್ ಪಲ್ಟಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಆಂಜನೇಯ ದೇವಸ್ಥಾನದ ಬಳಿ ನಡೆದಿದೆ.
ಅಪಘಾತದಲ್ಲಿ 8 ಜನರ ಪರಿಸ್ಥಿತಿ ಗಂಭೀರವಾಗಿದ್ದು, 33ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡೊದ್ದಾರೆ.
ಇಂದು ಬೆಳಗ್ಗೆ 5 ಗಂಟೆ ಸುಮಾರಿಗೆ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊಟಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಣಿವೆ ಆಂಜನೇಯ ದೇವಸ್ಥಾನದ ಬಳಿ ಪಲ್ಟಿ ಹೊಡೆದಿದೆ. ಅಪಘಾತದ ಭೀಕರತೆಗೆ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಾಗೂ ಪಲ್ಟಿ ಹೊಡೆದ ಬಸ್ ಸಂಪೂರ್ಣ ನುಜ್ಜುಗುಜ್ಜಾಗಿದೆ.
ಸದ್ಯ ಮೂವರು ಮೃತದೇಹಗಳನ್ನು ಹೊಳಲ್ಕೆರೆ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆಯಲ್ಲಿ ಒಟ್ಟು 33 ಜನ ಗಾಯಾಳುಗಳಾಗಿದ್ದು, ಇದರಲ್ಲಿ 18 ಜನರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು 6 ಜನರನ್ನು ದಾವಣಗೆರೆ ಮತ್ತು 9 ಜನರನ್ನು ಶಿವಮೊಗ್ಗ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ.






