ಜನಮನ
ಭಾರಿ ಮಳೆ ಮುನ್ಸೂಚನೆ; ಮಂಗಳೂರು ಸೇರಿದಂತೆ ಈ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ..!

Views: 179
ರಾಜ್ಯದಲ್ಲಿ ಇಂದಿನಿಂದ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು ಹಮಾನ ಇಲಾಖೆ ರಾಜ್ಯದ 14 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಇಂದಿನಿಂದ 14 ಜಿಲ್ಲೆಗಳಲ್ಲಿ ಅಧಿಕ ಮಳೆಯಾಗಲಿದೆ ಎಂದು ತಿಳಿಸಿದೆ.
ದಾವಣಗೆರೆ, ವಿಜಯನಗರ, ಬಾಗಲಕೋಟೆ, ಗದಗ, ಬೀದರ್, ಹಾವೇರಿ, ರಾಯಚೂರ, ಕೊಪ್ಪಳ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮತ್ತೆ ಎರಡು ದಿನ ಬಿಟ್ಟು, ಅಂದರೆ ಏ. 9 ರಂದು ಚಿತ್ರದುರ್ಗ, ಚಾಮರಾಜನಗರ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಕೊಪ್ಪಳ, ಚಿಕ್ಕಬಳ್ಳಾಪುರ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮಂಡ್ಯ ಮೈಸೂರು, ತುಮಕೂರು, ವಿಜಯನಗರದಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.






