ಇತರೆ
ಬೈಕ್ ಚಲಾಯಿಸುತ್ತಿದ್ದ ತಂದೆ- ಮಗ ರಸ್ತೆ ಅಪಘಾತದಲ್ಲಿ ಸಾವು

Views: 152
ಚಿಕ್ಕಬಳ್ಳಾಪುರ: ಬೈಕ್ನಲ್ಲಿ ಸಂಚರಿಸುತ್ತಿದ್ದ ತಂದೆ ಮಗ ಇಬ್ಬರೂ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಬೆಂಗಳೂರು- ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಘಟನೆ ನಡೆದಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ಘಟನೆ ನಡೆದಿದೆ. ಮುಂದೆ ಹೋಗುತ್ತಿದ್ದ ವಾಹನಕ್ಕೆ ತಂದೆ ಮಗ ಪ್ರಯಣಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಿಯಂತ್ರಣ ಕಳೆದುಕೊಂಡು ಈ ಅಪಘಾತ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ಉಪಾಧೀಕ್ಷಕ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.






