ಇತರೆ

ಬೈಕ್-ಕಾರು ನಡುವೆ ಅಪಘಾತ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಸಾವು

Views: 53

ಚಿಕ್ಕಮಗಳೂರು: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಹೆಡ್ ಕಾನ್ಸ್ಟೇಬಲ್ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ತಂಗಲಿ  ಕ್ರಾಸ್ ಬಳಿ ನಡೆದಿದೆ.

ಕಡೂರು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಮಲ್ಲಿಕಾರ್ಜುನ (44)ಸಾವನ್ನಪ್ಪಿರುವ ಅಧಿಕಾರಿ. ಇವರು ತಮ್ಮ ಕರ್ತವ್ಯ ಮುಗಿಸಿಕೊಂಡು ಮನೆಗೆ ವಾಪಸ್ ಆಗುತ್ತಿದ್ದರು. ಈ ವೇಳೆ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ತಂಗಲಿ ಕ್ರಾಸ್ ಬಳಿ ಕಾರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಪರಿಣಾಮ ಹೆಡ್ ಕಾನ್ಸ್ಟೇಬಲ್ ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಅಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಮೃತಪಟ್ಟಿದ್ದಾರೆ.

Related Articles

Back to top button
error: Content is protected !!